ಅ.2: ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಆಶ್ರಯದಲ್ಲಿ ‘ಬ್ರಾಂಡ್ ಮಂಗಳೂರು ಫ್ರೆಂಡ್‌ ಶಿಪ್ ಕ್ರಿಕೆಟ್ ಟೂರ್ನಿ

Spread the love

ಅ.2: ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಆಶ್ರಯದಲ್ಲಿ ‘ಬ್ರಾಂಡ್ ಮಂಗಳೂರು ಫ್ರೆಂಡ್‌ ಶಿಪ್ ಕ್ರಿಕೆಟ್ ಟೂರ್ನಿ

ಮಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಪತ್ರಕರ್ತ ದಿವಂಗತ ನಾಗೇಶ್ ಪಡು ಸ್ಮರಣಾರ್ಥವಾಗಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ)ದ ಆಶ್ರಯದಲ್ಲಿ ‘ಬ್ರಾಂಡ್ ಮಂಗಳೂರು ಫ್ರೆಂಡ್‌ ಶಿಪ್ ಕ್ರಿಕೆಟ್ ಟೂರ್ನಿ ಅ.2ರಂದು ಬೆಳಗ್ಗೆ 9:00ರಿಂದ ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ.

ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಉದ್ಘಾಟನೆ ನೆರವೇರಿಸುವರು, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ದ.ಕ. ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ .ಆರ್ , ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ , ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮೀಪ್ರಸಾದ್,ದ.ಕ. ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಡಾ. ಮಂಜುನಾಥ್ ಭಂಡಾರಿ, ಅದಾನಿ ಗ್ರೂಪ್‌ಅಧ್ಯಕ್ಷ ಕಿಶೋರ್ ಆಳ್ವ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕೆ. ಆನಂದ್ ಶೆಟ್ಟಿ ಭಾಗವಹಿಸುವರು ಅಪರಾಹ್ನ 3 ಗಂಟೆಗೆ ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಬಹುಮಾನ ವಿತರಣೆ ಮಾಡಲಿರುವರು. ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ್ ರಾವ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿವಿಯ ಕುಲಪತಿ ಪ್ರೊ.ಪಿ .ಯಸ್.ಯಡಪಡಿತ್ತಾಯ , ಕೆನರಾ ಬ್ಯಾಂಕ್ ಮಹಾ ಪ್ರಬಂಧಕ ಯೋಗೀಶ್ ಆಚಾರ್ಯ ,ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ನಝೀರ್, ದ.ಕ. ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಭಾಗವಹಿಸಲಿರುವರು.

ಕ್ರಿಕೆಟ್ ಟೂರ್ನಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ತಂಡ, ಮಂಗಳೂರು ನಗರ ಪೊಲೀಸ್ ಆಯುಕ್ತರ ತಂಡ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ತಂಡ , ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತರ ತಂಡ , ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿಗಳ ತಂಡ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ನೇತೃತ್ವದ ನಗರ ಮತ್ತು ಗ್ರಾಮೀಣ ಪತ್ರಕರ್ತರ ತಂಡಗಳು ಭಾಗವಹಿಸಲಿವೆ ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love