ಅ. 20: ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ

Spread the love

ಅ. 20: ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಇವರ ಸಹಯೋಗದಲ್ಲಿ ಅಕ್ಟೋಬರ್ 20 ರಂದು ಶುಕ್ರವಾರ ಬೆಳಿಗ್ಗೆ 8.30 ಗಂಟೆಗೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ರಕ್ತದ ಕೊರತೆ ಇರುವುದನ್ನು ಮನಗಂಡು ಅಲ್ಲಿನ ಅರ್ಥಿಕ ಅಶಕ್ತ ರೋಗಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ರಕ್ತದಾನ ಶಿಬಿರದಲ್ಲಿ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವುದರ ಮೂಲಕ ಈ ಶಿಬಿರವನ್ನು ಯಶಸ್ವಿಗೊಳಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love