ಅ.20 ರಂದು ದಕ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 20 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 11 – ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, ಮಧ್ಯಾಹ್ನ 12:10 – ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ರೈ ಎಸ್ಟೇಟ್ಸ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಶೋಕ ಜನ- ಮನ 2025 ಉದ್ಘಾಟನಾ ಕಾರ್ಯಕ್ರಮ, ಬಳಿಕ ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚೆ ಮತ್ತು ಸಭೆ, ಸಂಜೆ 5:10 – ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.