ಅ. 26: ಉಡುಪಿ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Spread the love

ಅ. 26: ಉಡುಪಿ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ, ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಅಕ್ಟೋಬರ್ 26 ರಂದು ಭಾನುವಾರ ನಗರದ ಅಜ್ಜರಕಾಡು ಪುರಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2.30 ರ ತನಕ ಆಯೋಜಿಸಲಾಗಿದೆ.

ರಕ್ತದಾನ ಶಿಬಿರದಲ್ಲಿ ಇತ್ತೀಚೆಗೆ ನೂತನವಾಗಿ ನೇಮಕಗೊಂಡ ವಿಧಾನಪರಿಷತ್ ಸದಸ್ಯೆ ಡಾ. ಆರತಿ ಕೃಷ್ಣ, ಮಂಗಳೂರು ವಿದ್ಯುತ್ ಶಕ್ತಿ ಸರಬರಾಜು ಮಂಡಳಿ ಅಧ್ಯಕ್ಷ ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಮ್ ಎ ಗಫೂರ್, ಗೇರು ಬೀಜ ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಬೀಜ ಮತ್ತು ಸಾವಯವ ಪ್ರಾಮಾಣಿಕರಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ದಾಸ್, ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರಶಾಂತ್ ಜತ್ತನ್ನ ಹಾಗೂ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರೊಂದಿಗೆ ಸಮಾಜದಲ್ಲಿ ಅಶಕ್ತರಾಗಿದ್ದು ಸ್ವ ಉದ್ಯಮದೊಂದಿಗೆ ಜೀವನ ಸಾಗಿಸಬೇಕಂಬ ಹಂಬಲ ಹೊಂದಿರುವ ಆಯ್ದ ಮಹಿಳೆಯರಿಗೆ ಹೊಲಿಗೆ ಯಂತ್ರಗಳ ವಿತರಣೆ ಮಾಡಲಾಗುವುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಮೇಶ್ ಕಾಂಚನ್ ವಹಿಸಲಿದ್ದು, ಉದ್ಘಾಟನೆಯನ್ನು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಗೌರವ ಅತಿಥಿಗಳಾಗಲಿದ್ದಾರೆ. ಹೊಲಿಗೆ ಯಂತ್ರಗಳನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವಿತರಿಸಲಿದ್ದಾರೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಡಾ. ಆರತಿ ಕೃಷ್ಣ ಸನ್ಮಾನಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಗೋಪಾಲ ಪೂಜಾರಿ, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಾಜು ಪೂಜಾರಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ ಕರ್ಜೆ, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತ ಪಿ ಶೆಟ್ಟಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಬಾಬು ಪೂಜಾರಿ ಭಾಗವಹಿಸಲಿದ್ದಾರೆ.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಕಳೆದ ಮೂರು ವರ್ಷಗಳಿಂದಲೂ ನಿರಂತರವಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಂಡು ಬಂದಿದ್ದು, ತೀರಾ ಬಡತನದಲ್ಲಿರುವ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಸುಮಾರು 600 ಯುನಿಟ್ ಕ್ಕಿಂತಲೂ ಹೆಚ್ಚು ರಕ್ತವನ್ನು ನೀಡಿರುತ್ತದೆ. ಈ ಬಾರಿ ಉಡುಪಿ ಮತ್ತು ಬ್ರಹ್ಮಾವರ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ 250 ಯುನಿಟ್ ಕ್ಕಿಂತಲೂ ಹೆಚ್ಚು ರಕ್ತವನ್ನುಸಂಗ್ರಹಿಸಿ ನೀಡಬೇಕು ಎಂಬ ಗುರಿಯನ್ನು ಹೊಂದಿದೆ.

ಆಸಕ್ತ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಬಡ ರೋಗಿಗಳ ಜೀವ ಉಳಿಸುವ ಪುಣ್ಯಕಾರ್ಯಕ್ಕೆ ಸಹಕಾರ ನೀಡುವಂತೆ ವಿನಂತಿ ಕೊಳ್ಳಲಾಗಿದ ರಕ್ತದಾನಿಗಳು 9449894375 (ಸತೀಶ್ ಪುತ್ರನ್), 9611393707 (ಸಂಜಯ್ ಆಚಾರ್ಯ), 8971433504 (ಕುಮಾರ್ ಬೈಕಾಡಿ), 7019286654 (ಅನಿತಾ ಬಾಬು ಪೂಜಾರಿ) ಸಂಪರ್ಕಿಸಲು ಕೋರಲಾಗಿದೆ.


Spread the love
Subscribe
Notify of

0 Comments
Inline Feedbacks
View all comments