ಅ.31: ದಕ ಜಿಲ್ಲೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆಗಸ್ಟ್ 31 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 11:15 ಮಂಗಳೂರು ವಿಮಾನ ನಿಲ್ದಾಣ ಆಗಮನ, ಮಧ್ಯಾಹ್ನ 1:30 ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಸಹಯೋಗ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನ, ಮಂಗಳೂರು ವತಿಯಿಂದ ಪ್ರೋ.ಕೆ.ಈ. ರಾಧಾಕೃಷ್ಣ ಅನುವಾದಿಸಿರುವ ನೇತಾಜಿ ಸುಭಾಸ್ ಚಂದ್ರ ಬೋಸ್‍ರವರ ಮೂರು ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮ, ಮಧ್ಯಾಹ್ನ 3:25 ಮಂಗಳೂರು ವಿಮಾನ ನಿಲ್ದಾಣದಿಂದ ಸಚಿವರು ಬೆಂಗಳೂರಿಗೆ ತೆರಳಲಿದ್ದಾರೆ.