ಆ. 10ರಂದು ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ

Spread the love

ಆ. 10ರಂದು ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು : ಈ ಬಾರಿಯ ಎಸೆಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಆ. 10ರಂದು ಅಪರಾಹ್ನ 3 ಗಂಟೆಗೆ ಪ್ರಕಟಿಸಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಆ. 7ಕ್ಕೆ ಪ್ರಕಟವಾಗಲಿದೆ ಎಂಬ ಸುದ್ದಿ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಕುರಿತು ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಕರೋನ ಭೀತಿಯ ನಡುವೆಯೂ 2019-20ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.


Spread the love