ಆ. 31: ಉಡುಪಿಯಲ್ಲಿ ಕೊಂಕಣಿ ಯುವ ಸಂಭ್ರಮ ‘ಕನಾಪ-2025’
ಉಡುಪಿ: ಕೊಂಕಣಿ ಸಾಹಿತ್ಯ ಕಲಾ ಹಾಗೂ ಸಾಂಸ್ಕೃತಿಕ ಸಂಘಟನೆ ಉಡುಪಿ ಜಿಲ್ಲೆ ಹಾಗೂ ಉಡುಪಿ ಧರ್ಮಪ್ರಾಂತ್ಯದ ಯುವ ಆಯೋಗದ ಸಹಯೋಗದಲ್ಲಿ ಕೊಂಕಣಿ ಮಾನ್ಯತಾ ದಿವಸದ ಪ್ರಯುಕ್ತ ಯುವ ಜನರಲ್ಲಿ ಕೊಂಕಣಿ ಭಾಷೆಯ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಕೊಂಕಣಿ ಯುವ ಸಂಭ್ರಮ ‘ಕನಾಪ-2025’ ಕವಿತೆ, ನೃತ್ಯ ಹಾಗೂ ಗಾಯನ ಸ್ಪರ್ಧೆ ಅಗೋಸ್ತ್ 31 ರಂದು ಭಾನುವಾರ ಮಧ್ಯಾಹ್ನ 2 ಗಂಟೆಗೆ ಉಡುಪಿ ಶೋಕಮಾತಾ ಚರ್ಚಿನ ಆವೆ ಮರಿಯ ಸಭಾಂಗಣದಲ್ಲಿ ಜರುಗಲಿದೆ.
ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಂಕಣಿ ಸಾಹಿತ್ಯ ಕಲೆ ಹಾಗೂ ಸಾಂಸ್ಕೃತಿಕ ಸಂಘಟನೆ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಡಾ. ಫ್ಲಾವಿಯಾ ಕ್ಯಾಸ್ಟಲಿನೊ ವಹಿಸಿಲಿದ್ದು ಮುಖ್ಯ ಅತಿಥಿಗಳಾಗಿ ಉಡುಪಿ ಶೋಕಮಾತಾ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ|ಚಾರ್ಲ್ಸ್ ಮಿನೇಜಸ್ ಭಾಗವಹಿಸುವರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ದಾಯ್ಜಿವರ್ಲ್ಡ್ ಮೀಡಿಯಾ ಪ್ರೈವೆಟ್ ಲಿಮಿಟೆಡ್ ಮಂಗಳೂರು ಇದರ ಸಂಸ್ಥಾಪಕರಾದ ವಾಲ್ಟರ್ ನಂದಳಿಕೆ ಭಾಗವಹಿಸುವರು.
ಕನಾಪ- 2025 ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನಗಳ ವಿತರಣೆ ನಡೆಸಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.