ಆ. 6ರಂದು ಉಡುಪಿ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಇಲ್ಲ – ಜಿಲ್ಲಾಡಳಿತ

Spread the love

ಆ. 6ರಂದು ಉಡುಪಿ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಇಲ್ಲ – ಜಿಲ್ಲಾಡಳಿತ

ಉಡುಪಿ: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಅದನ್ನೇ ಬಂಡವಾಳವಾಗಿಸಿಕೊಂಡು ಕೆಲವೊಂದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸುವುದೇ ತಮ್ಮ ಕಾಯಕವಾಗಿಸಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗಿನಿಂದ ನಿರಂತರ ಗಾಳಿ ಮಳೆಯಾಗುತ್ತಿದ್ದು ಅದನ್ನೇ ನೆಪವಾಗಿಕೊಂಡು ಆ. 6 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿಸಲಾಗಿದೆ. ಕೆಲವು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗುತ್ತಿರುವ ಈ ಸಂದೇಶ ವಾಸ್ತವವಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲಟ್೯ ಘೋಷಿಸಿಲ್ಲ‌ ಎಂದೂ ಕೂಡ ಜಿಲ್ಲಾಡಳಿತ ಸ್ಪಷ್ಟ ಪಡಿಸಿದೆ.


Spread the love