ಇಂಜಿನಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Spread the love

ಇಂಜಿನಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೋರ್ವ ಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ವರದಿಯಾಗಿದೆ.

ಮೃತಳನ್ನು ನಗರದ ಆಕಾಶಭವನ ನಿವಾಸಿ  ಮನೀಷಾ ಚಂದ್ರಶೇಖರ್ (21) ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿನಿಯು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೂರನೇ ವರ್ಷದ ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ಪಡೆಯುತ್ತಿದ್ದು ಆತ್ಮಹತ್ಯಗೆ ನಿಖರ ಕಾರಣ ಏನು ಎಂದು ತಿಳಿದು ಬಂದಿಲ್ಲವಾದರೂ ಡೆತ್ ನೋಟ್ ಲಭ್ಯವಾಗಿದೆ.

ಕಾವೂರು ಪೋಲಿಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Spread the love