ಇನ್ನೋವಾ ಕಾರಿನಲ್ಲಿ ನಕಲಿ ನಂಬರ್ ಪ್ಲೇಟ್ ಬಳಸಿ ದನ ಸಾಗಾಟ: ಒರ್ವ ಪೊಲೀಸ್ ವಶಕ್ಕೆ, ಇಬ್ಬರು ಪರಾರಿ
ಬೆಳ್ತಂಗಡಿ: ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಪೋಲಿಸರು ವಶಕ್ಕೆ ಪಡೆದ ಘಟನೆ ಗುರುವಾಯನಕೆರೆ ಸಮೀಪ ಬುಧವಾರ ಬೆಳಿಗ್ಗೆ ಸಂಭವಿಸಿದೆ. ವಾಹನದಲ್ಲಿ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಾಥಮಿಕ ಮೂಲಗಳ ಪ್ರಕಾರ ಚಾರ್ಮಾಡಿ ಕಡೆಯಿಂದ ಅತೀಯಾದ ವೇಗದಲ್ಲಿ ಬಂದ ಇನ್ನೋವಾ ಕಾರು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು ಗುರುವಾಯನಕೆರೆಯಲ್ಲಿ ವಾಹನವನ್ನು ತಡೆದ ವೇಳೆ ಅದರಲ್ಲಿ ದನ ಇರುವುದು ಪತ್ತೆಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಾಟ ಮಾಡಲಾಗುತ್ತಿದ್ದು ಕಾರಿಗೆ ನಕಲಿ ನಂಬರ್ ಪ್ಲೇಟ್ ಅಂಟಿಸಿರುವುದು ಕಂಡುಬಂದಿದೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.