ಉಚ್ಚಾಟನೆಯಿಂದ ವಿಚಲಿತನಾಗಿಲ್ಲ, ಚುನಾವಣೆ ಗೆದ್ದು ಮತ್ತೆ ಬಿಜೆಪಿಯ ಶಾಸಕನಾಗುತ್ತೇನೆ – ರಘುಪತಿ ಭಟ್

Spread the love

ಉಚ್ಚಾಟನೆಯಿಂದ ವಿಚಲಿತನಾಗಿಲ್ಲ, ಚುನಾವಣೆ ಗೆದ್ದು ಮತ್ತೆ ಬಿಜೆಪಿಯ ಶಾಸಕನಾಗುತ್ತೇನೆ – ರಘುಪತಿ ಭಟ್

ಉಡುಪಿ: ಕರಾವಳಿ ವಿಚಾರದಲ್ಲಿ ಬಿಜೆಪಿ ಮನಬಂದಂತೆ ನಡೆದುಕೊಳ್ಳುತ್ತದೆ ಎಂದು ಉಚ್ಚಾಟಿತ ಮಾಜಿ ಶಾಸಕ ರಘುಪತಿ ಭಟ್ ರಾಜ್ಯ ನಾಯಕರ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.

ಅವರು ಉಡುಪಿಯಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿ ಉಚ್ಛಾಟನೆಯಾದದ್ದು ಮಾಧ್ಯಮದ ಮೂಲಕ ತಿಳಿಯಿತು ಬೇಸರವಾಯಿತು ಆದರೆ ಶಿಸ್ತು ಸಮಿತಿಯ ನೋಟಿಸ್ ಈವರೆಗೆ ನನಗೆ ತಲುಪಿಲ್ಲ. ಇಂತಹ ವರ್ತನೆಯಿಂದ ಪಕ್ಷ ಎಂದರೆ ಜೀವ ಬಿಡುವ ಕಾರ್ಯಕರ್ತರಿಗೆ ನಿರಂತರ ನೋವಾಗುತ್ತಿದೆ ಎಂದರು.

ಪಕ್ಷದ ಎಲ್ಲಾ ಹುದ್ದೆಯಿಂದ ವಜಾ ಮಾಡುವುದಾಗಿ ಹೇಳಿದ್ದಾರೆ ನನ್ನದು ಕಾರ್ಯಕರ್ತ ಹುದ್ದೆ, ಪಕ್ಷದಲ್ಲಿ ನನಗೆ ಯಾವ ಹುದ್ದೆಯನ್ನು ಕೊಟ್ಟಿಲ್ಲ ಬಿಜೆಪಿ ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಸ್ಪಷ್ಟಪಡಿಸಬೇಕು.ಟಿಕೆಟ್ ತಪ್ಪಿದಾಗ ಸ್ಥಾನಮಾನ ಕೊಡುತ್ತೇವೆ ಎಂದಿದ್ದರು ಆದರೆ ಪಕ್ಷ ನನ್ನನ್ನು ರಾಜ್ಯ ಕಾರ್ಯಕಾರಿ ಸದಸ್ಯನನ್ನೂ ಮಾಡಿಲ್ಲ ಈ ವಜಾಕ್ಕೆಲ್ಲ ನಾನು ತಲೆ ಬಿಸಿ ಮಾಡಿಕೊಳ್ಳಲ್ಲ ನಾನು ಮೋದಿಗೆ ಬೈದಿಲ್ಲ.. ರಾಜ್ಯದ ನಾಯಕರಿಗೆ ಬೈದಿಲ್ಲ ಆದರೆ ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ ಎಂದರು.

ಪಕ್ಷ ನಾಯಕರನ್ನು ಟೀಕೆ ಮಾಡಿದ ಜಗದೀಶ್ ಶೆಟ್ಟರ್ ಒಂದು ವರ್ಷದಲ್ಲಿ ಪಕ್ಷಕ್ಕೆ ವಾಪಾಸಾಗಿ ಲೋಕಸಭಾ ಟಿಕೆಟ್ ಪಡೆದುಕೊಂಡರು. ಇದು ಶಾಶ್ವತ ವಜಾ ಅಲ್ಲ ಪರಿಷತ್ ಚುನಾವಣೆಯಲ್ಲಿ ನಾನು ಗೆದ್ದ ಮೇಲೆ ವಜಾ ರದ್ದಾಗುತ್ತದೆ. ಒಬ್ಬ ಬಿಜೆಪಿ ಕಾರ್ಯಕರ್ತನನ್ನು ವಜಾ ಮಾಡಲು ಸಾಧ್ಯವಿಲ್ಲ ಎಂದರು.

ಬಿಜೆಪಿ ಶಿಸ್ತು ಸಮಿತಿಗೆ ನನ್ನ ಹಲವು ಪ್ರಶ್ನೆ ಇದ್ದು, ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಮೇಲೆ ಏನು ಶಿಸ್ತು ಕ್ರಮವಾಗಿದೆ? ಅಡ್ಡ ಮತದಾನ ಮಾಡಿದ ಇಬ್ಬರೂ ಶಾಸಕರನ್ನ ಏನು ಮಾಡಿದ್ದೀರಿ? ವಜಾ ಮಾಡಿದ್ದೀರಾ? ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಬೆಂಬಲಿಸಿದ ಶಾಸಕರನ್ನು ವಜಾ ಮಾಡಿದ್ದೀರಾ? ಅಗೋಚರವಾಗಿ ಬಿಜೆಪಿ ವಿರುದ್ಧ ಕೆಲಸ ಮಾಡುವವರ ಮೇಲೆ ಏನು ಕ್ರಮ ಆಗಿದೆ. ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದರು ಎಂದು ಬೇಸರ ವ್ಯಕ್ತಪಡಿಸಿದರು.

ಪಕ್ಷದ ದೃಷ್ಟಿಯಿಂದ ಜಿಲ್ಲಾಧ್ಯಕ್ಷರು ಶಾಸಕರು ಸುನಿಲ್ ಕುಮಾರ್ ಮಾಡುವುದು ಸರಿ ಇದೆ. ಪಕ್ಷದಿಂದ ವಜಾ ಮಾಡುವ ಸಮಾನ ನ್ಯಾಯ ಜಾರಿಗೆ ತನ್ನಿ ಬಹಿರಂಗ ಹೇಳಿಕೆ ಕೊಡುವ ಭ್ರಷ್ಟಾಚಾರ ಆರೋಪ ಮಾಡುವ ನಾಯಕರ ಮೇಲೆ ನಿಮ್ಮ ಕ್ರಮ ಏನು? ಪಕ್ಷದ ಅಧಿಕೃತ ಅಭ್ಯರ್ಥಿಗಳ ಸೋಲಿಸಲು ಯಾರಿಗೆ ಎಷ್ಟು ಹಣ ಹೋಗಿದೆ, ಯಾರು ಕೆಲಸ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳೇ ಆರೋಪ ಮಾಡುತ್ತಿದ್ದಾರೆ ವಿಪ್ ಉಲ್ಲಂಘನೆ ಮಾಡಿದವರ ಮೇಲೆ ಏನು ಕ್ರಮ ಕೈಗೊಂಡಿದ್ದೀರಿ? ನಾನೊಬ್ಬ ಪಾಪದವ, ಬಡಪಾಯಿ ಮಾತ್ರ ನಿಮಗೆ ವಜಾಮಾಡಲು ಸಿಕ್ಕಿದ್ದಾ? ಎಂದು ಪ್ರಶ್ನೆ ಮಾಡಿದರು.

ನಾನು ವಿಚಲಿತನಾಗಿಲ್ಲ ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ ಜಗದೀಶ್ ಶೆಟ್ಟರ್ ಅವರ ಪ್ರಕರಣವೇ ನನಗೆ ಮಾದರಿ. ಕರಾವಳಿ ಬಿಜೆಪಿ ಕಾರ್ಯಕರ್ತರಿಗೆ ಶಿಸ್ತು ಜಾಸ್ತಿ ಶಿಕ್ಷೆಯೂ ಜಾಸ್ತಿ ಉಡುಪಿಯಲ್ಲಿ ನಾಲ್ವರು ಸಿಟ್ಟಿಂಗ್ ಎಂಎಲ್ಎಗಳನ್ನು ಬದಲಿಸಲಾಯಿತು. ಇದನ್ನ ಶಿವಮೊಗ್ಗದಲ್ಲಿ ಬೆಂಗಳೂರಿನಲ್ಲಿ ಬಾಗಲಕೋಟೆ ಹುಬ್ಬಳ್ಳಿಯಲ್ಲಿ ಮಾಡಕ್ಕಾಗುತ್ತಾ?ಉಡುಪಿಯಲ್ಲಿ ಪಾಪದ ಕಾರ್ಯಕರ್ತರು ಸಂಘ ಪಕ್ಷ ಅಂತ ಕೆಲಸ ಮಾಡುತ್ತಾರೆ ಕರಾವಳಿ ವಿಚಾರದಲದಲ್ಲಿ ಬಿಜೆಪಿ ಮನಬಂದಂತೆ ನಡೆದುಕೊಳ್ಳುತ್ತದೆ. ಕರಾವಳಿಗೆ ಮೀಸಲಿಟ್ಟ ಸ್ಥಾನವನ್ನು ಶಿವಮೊಗ್ಗಕ್ಕೆ ಕೊಟ್ಟಿದ್ದಾರೆ ಈ ಚುನಾವಣೆಯಲ್ಲಿ ಮತದಾರರು ಕಾರ್ಯಕರ್ತರು ಸರಿಯಾದ ಉತ್ತರ ಕೊಡುತ್ತಾರೆ ಎಂದರು.


Spread the love

Leave a Reply