ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ

Spread the love

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ

ಉಚ್ಚಿಲ: ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಶುಕ್ರವಾರ ಉಚ್ಚಿಲದ ಪ್ರಸಿದ್ಧ ಶ್ರೀ ಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದರು.

ದೇವರ ದರ್ಶನದ ಬಳಿಕ, ಶ್ರೀ ಕ್ಷೇತ್ರದ ವತಿಯಿಂದ ಸಚಿವರಿಗೆ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಸದಸ್ಯರಾದ ಕಿರಣ್ ಕುಮಾರ್ ಪಿತ್ರೊಡಿ, ದೇವಳದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಲಾವಣ್ಯ ಬಲ್ಲಾಳ್, ಸುರೇಶ್ ಕಾಂಚನ್ ಕೋಟ, ಸೌರಭ್ ಬಲ್ಲಾಳ್, ಹಾಗೂ ಶ್ರೀ ಕ್ಷೇತ್ರದ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


Spread the love