ಉಡುಪಿಗೆ ಮೋದಿ ಆಗಮನ: ಬಿಗಿ ಪೊಲೀಸ್ ಬಂದೋಬಸ್ತ್, ಸಿಂಗಾರಗೊಂಡ ನಗರ

Spread the love

ಉಡುಪಿಗೆ ಮೋದಿ ಆಗಮನ: ಬಿಗಿ ಪೊಲೀಸ್ ಬಂದೋಬಸ್ತ್, ಸಿಂಗಾರಗೊಂಡ ನಗರ

ಉಡುಪಿ: ನವೆಂಬರ್ 28 ರಂದು ಉಡುಪಿ ಶ್ರೀ ಕ್ರಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸರು ವ್ಯಾಪಕ ಬಂದೋಬಸ್ತ್ ವ್ಯವಸ್ಥೆನ್ನು ಮಾಡಿದ್ದು ಬಂದೋಬಸ್ತಿಗಾಗಿ ಎರಡು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ.

ಭದ್ರತೆಗಾಗಿ 9 ಮಂದಿ ಎಸ್ಪಿಗಳು, ಒಬ್ಬರು ಹೆಚ್ಚುವರಿ ಎಸ್ಪಿ, 27 ಡಿವೈಎಸ್ಪಿ, 49 ಇನ್ಸ್ ಪೆಕ್ಟರ್ ಗಳು, 127 ಪಿಎಸ್ ಐ, 232 ಎಎಸ್ ಐ, 1917 ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

ಪರ್ಯಾಯ ಶ್ರೀ ಪುತ್ತಿಗೆಮಠ ಶ್ರೀ ಕೃಷ್ಣಮಠದಲ್ಲಿ ಬೃಹತ್ ಗೀತೋತ್ಸವದ ನಿಮಿತ್ತ ನ.28ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತ್ತಿರುವುದರಿಂದ ಎಸ್ಪಿಜಿ ತಂಡ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಶ್ರೀ ಕೃಷ್ಣಮಠದ ಪಾರ್ಕಿಂಗ್ ಪ್ರದೇಶ, ಹೆಲಿಪ್ಯಾಡ್ ಸಹಿತ ಪ್ರಧಾನಿಯವರು. ಸಂಚರಿಸುವ ಮಾರ್ಗ, ರಥಬೀದಿ, ಕೃಷ್ಣಮಠದಲ್ಲಿ ಪರಿಶೀಲನೆ ಪ್ರಕ್ರಿಯೆ ನಡೆಸಿದ್ದಾರೆ. ವಿಶೇಷವಾಗಿ ಪಾರಾಯಣ ನಡೆಯುವ ಸ್ಥಳ, ವೇದಿಕೆ ಹಾಗೂ ಆಸನದ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಭದ್ರತೆ ಹಾಗೂ ಸುರಕ್ಷತೆಯ ವಿಚಾರವಾಗಿ ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ಪ್ರಧಾನಿ ಮೋದಿಯವರು ಸಂಚರಿಸುವ ಮಾರ್ಗದಲ್ಲಿ ಶ್ವಾನದಳ ಹಾಗೂ ಸ್ಫೋಟಕ ಪತ್ತೆ ದಳದಿಂದ ಪರಿಶೀಲನೆ ಪ್ರಕ್ರಿಯೆ ನಡೆಯಿತು. ಶ್ವಾನಗಳು ಎಲ್ಲೆಡೆ ಸಂಚಾರ ಮಾಡಿವೆ. ಹಾಗೆಯೇ ಸ್ಫೋಟಕ ಪತ್ತೆ ಯಂತ್ರವನ್ನು ಎಲ್ಲೆಡೆಯಲ್ಲೂ ಇಟ್ಟು ಪರಿಶೀಲನೆ ನಡೆಸಲಾಗಿದೆ. ತದ ಅನಂತರ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಪಾರ್ಕಿಂಗ್ ಪ್ರದೇಶದ ವೇದಿಕೆ ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಸಲಹೆ ಸೂಚನೆಗಳನ್ನು ಸಿಬಂದಿ ವರ್ಗಕ್ಕೆ ನೀಡಿ, ಮಾಹಿತಿ ಕಲೆ ಹಾಕಿದರು.

ಪ್ರಧಾನಿ ನರೇಂದ್ರ ಮೋದಿಯವರ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಕೇಸರಿ ಬಾವುಟ ಹಾರಾಟ ಆರಂಭವಾಗಿದೆ. ಪ್ರಧಾನಿಯವರ ಭಾವಚಿತ್ರ ಇರುವ ಕಟೌಟ್ಗಳು ಅಲ್ಲಲ್ಲಿ ರಾರಾಜಿಸುತ್ತಿವೆ. ಕೆಲವು ಕಡೆಗಳಲ್ಲಿ ಕೇಸರಿ ಬಂಟಿಂಗ್ಸ್ ಗಳನ್ನು ಹಾಕಲಾಗಿದೆ. ಎಲ್ಲ ಕಡೆಗಳಲ್ಲೂ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ.

ನವೆಂಬರ್ 28 ರಂದು ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತ್ತಿರುವುದರಿಂದ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಶ್ರೀ ಕೃಷ್ಣ ಮಠಕ್ಕೆ ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಿಲಾಗಿದೆ ಎಂದು ಮಠದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.


Spread the love
Subscribe
Notify of

0 Comments
Inline Feedbacks
View all comments