ಉಡುಪಿಯಲ್ಲಿ ಕಾಂಗ್ರೆಸ್-  ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ – ಪ್ರಮೋದ್ ಮಧ್ವರಾಜ್

Spread the love

ಉಡುಪಿಯಲ್ಲಿ ಕಾಂಗ್ರೆಸ್-  ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ – ಪ್ರಮೋದ್ ಮಧ್ವರಾಜ್

ಉಡುಪಿ: ನಾನು ಕಾಂಗ್ರೆಸ್- ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿದ್ದು, ಮೈತ್ರಿ ಧರ್ಮದಂತೆ ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್ ಪರವಾಗಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹೇಳಿದರು.

ಅವರು ಶುಕ್ರವಾರ ರಾತ್ರಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಟಿಕೇಟ್ ಪಡೆದು ಮೊದಲ ಬಾರಿಗೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ನಾನು ಕಾಂಗ್ರೆಸ್- ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿ ಆಗಿದ್ದು ಎರಡು ಪಕ್ಷದ ಚಿಹ್ನೆಯನ್ನು ಒಂದೇ ಶಾಲಿನಲ್ಲಿ ಮುದ್ರಿಸಿಕೊಂಡಿದ್ದೇನೆ. ಇಂತಹ ಶಾಲು ಈ ವರೆಗೆ ಯಾರೂ ತಯಾರು ಮಾಡಿಲ್ಲ. ಈ ಶಾಲನ್ನು ಎಪ್ರೀಲ್ 18 ರವರೆಗೆ ತೊಡುತ್ತೇನೆ. ಚಿಹ್ನೆಯ ಬಗ್ಗೆ ಜನರಿಗೆ ಉತ್ತರ ಕೊಟ್ಟು ಸಾಕಯ್ತು ಎಂದ ಪ್ರಮೋದ್  ಉಡುಪಿಯಲ್ಲಿ ಕಾಂಗ್ರೆಸ್-  ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ ಎಂದರು.

ನಾನು ಕಾಂಗ್ರೆಸ್ ಪಕ್ಷದ ಟಿಕೇಟ್ ಆಕಾಂಕ್ಷಿಯಾಗಿದ್ದೆ ಅದರಂತೆ ಮೈತ್ರಿ ಧರ್ಮದಂತೆ   ಜೆಡಿಎಸ್ ಅಭ್ಯರ್ಥಿ ಯಾಗಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸ್ತೇನೆ. ಉಭಯ ಜಿಲ್ಲೆಗಳ ಜನತೆ ಕೆಲಸ ಮಾಡುವ ಸಂಸದರನ್ನು ಆಯ್ಕೆ  ಮಾಡಬೇಕು. ಇಡೀ ದೇಶದಲ್ಲಿ ಪ್ರಥಮ ಬಾರಿಗೆ ಇಂತಹ ಒಂದು ಅವಕಾಶ ನನಗೆ ಸಿಕ್ಕಿದೆ.  ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಉಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದು ಒಂದು ವೇಳೆ ಗೆದ್ದು ಬಂದರೆ ರಾಜ ಧರ್ಮಪಾಲಿಸುತ್ತೇನೆ ಎಂದರು.ಮನೆಗೆ ಹೋಗುವ ಮೊದಲು ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟಿದ್ದೇನೆ. ಮುಂದಿನ ಎರಡು ದಿನಗಳಲ್ಲಿ ಎರಡು ಜಿಲ್ಲೆಗಳ ಪ್ರವಾಸ ಮಾಡುತ್ತೇನೆ. ಮಾರ್ಚ್ 25ರಂದು ಎರಡು ಪಕ್ಷದ ನಾಯಕರೊಂದಿಗೆ ಸೇರಿ ನಾಮಪತ್ರ ಸಲ್ಲಿಸುತ್ತೇನೆ ಎಂದರು.


Spread the love