ಉಡುಪಿಯಲ್ಲಿ ಜಿಲ್ಲಾಡಳಿತ ವತಿಯಿಂದ ಸರಳವಾಗಿ ಬೃಹ್ಮಶ್ರೀ ನಾರಾಯಣ ಗುರು ಜಯಂತಿ

Spread the love

ಉಡುಪಿಯಲ್ಲಿ ಜಿಲ್ಲಾಡಳಿತ ವತಿಯಿಂದ ಸರಳವಾಗಿ ಬೃಹ್ಮಶ್ರೀ ನಾರಾಯಣ ಗುರು ಜಯಂತಿ

ಮಣಿಪಾಲ: ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಬೃಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದ ಅಂಗವಾಗಿ ಸರಳವಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್‌ರವರು ಬೃಹ್ಮಶ್ರೀ ನಾರಾಯಣ ಗುರು ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಮಾಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love