Home Mangalorean News Kannada News ಉಡುಪಿ ಎಸ್ಪಿ ಅರುಣ್ ಸಹಿತ ನಾಲ್ವರು ಪೊಲೀಸರಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’

ಉಡುಪಿ ಎಸ್ಪಿ ಅರುಣ್ ಸಹಿತ ನಾಲ್ವರು ಪೊಲೀಸರಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’

Spread the love

ಉಡುಪಿ ಎಸ್ಪಿ ಅರುಣ್ ಸಹಿತ ನಾಲ್ವರು ಪೊಲೀಸರಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’

ಉಡುಪಿ: ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ‘ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ’ 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸರು ಭಾಜನರಾಗಿದ್ದಾರೆ.

ಮಲ್ಪೆ ಕರಾವಳಿ ಕಾವಲು ಪೊಲೀಸ್ನ ಎಸ್ಸೈ ವೈಲೆಟ್ ಫೆಮಿನಾ, ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ಗುರುದಾಸ್, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್ಮ್ಡ್ ಹೆಡ್ ಕಾನ್ಸ್ಟೇಬಲ್ ಸಂತೋಷ್ ಕೂಡ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಪದಕವನ್ನು ಮೇ 21ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.


Spread the love

Exit mobile version