ಉಡುಪಿ: ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್ ಪೂಜಾರಿ ನಿಧನ
ಉಡುಪಿ: ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ.
ಅವರು ಭಾನುವಾರ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದರು ಎಂದು ವೈದ್ಯರು ಘೋಷಿಸಿದರು ಎಂದು ತಿಳಿದು ಬಂದಿದೆ.
‘ಕಾಮಿಡಿ ಕಿಲಾಡಿಗಳು’ ಸೀಸನ್ 3ರ ವಿಜೇತರಾಗಿ ಗಮನ ಸೆಳೆದ ರಾಕೇಶ್, ಹಾಸ್ಯಪ್ರಿಯ ವ್ಯಕ್ತಿತ್ವದಿಂದ ಅಭಿಮಾನಿಗಳ ಮನ ಗೆದ್ದಿದ್ದರು. ಕಿರುತೆರೆಯ ಜೊತೆ ಜೊತೆಗೆ ಚಿತ್ರರಂಗದಲ್ಲೂ ಅವರು ನಟನ ಚಾತುರ್ಯ ಮೆರೆದಿದ್ದರು.