ಉಡುಪಿ : ಕಿರಿಯ ಮಹಿಳಾ ಆರೋಗ್ಯ ಹುದ್ದೆ- ಅರ್ಜಿ ಆಹ್ವಾನ

Spread the love

ಉಡುಪಿ : ಕಿರಿಯ ಮಹಿಳಾ ಆರೋಗ್ಯ ಹುದ್ದೆ- ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಯನ್ನು ಮಾಸಿಕ 15000 ರೂ. ವೇತನದಂತೆ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಛೇರಿ, ಅಜ್ಜರಕಾಡು, ಉಡುಪಿ ಇಲ್ಲಿಂದ ಪಡೆಯಬಹುದು.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 23 ಕೊನೆಯ ದಿನವಾಗಿದೆ. ಸೆಪ್ಟಂಬರ್ 24 ರಂದು 10.30 ಕ್ಕೆ ಸಂದರ್ಶನ ನಡೆಯಲಿದ್ದು, ವಿದ್ಯಾರ್ಹತೆಯ ಎಲ್ಲಾ ಮೂಲ ದಾಖಲೆಯೊಂದಿಗೆ ಹಾಜರಾಗಬೇಕು.

ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2536650 ನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love