ಉಡುಪಿ: ಕೋವಿಡ್ – 19 ಪಾಸಿಟಿವ್ ವಿದ್ಯಾರ್ಥಿಗಳಿಗೂ ಸಹ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯಲು ಅವಕಾಶ

Spread the love

ಉಡುಪಿ: ಕೋವಿಡ್ – 19 ಪಾಸಿಟಿವ್ ವಿದ್ಯಾರ್ಥಿಗಳಿಗೂ ಸಹ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯಲು ಅವಕಾಶ

ಉಡುಪಿ: ಸಪ್ಟೆಂಬರ್ 7 ರಿಂದ 19 ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ.ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ ಕೋವಿಡ್ -19 ಸೋಂಕು ದೃಢಪಟ್ಟಿರುವ ವಿದ್ಯಾರ್ಥಿಗಳಿಗೂ ಸಹ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಉಪನಿರ್ದೇಶಕರಾದ ಭಗವಂತ ಕಟ್ಟಿಮನಿ ತಿಳಿಸಿದ್ದಾರೆ,

ಇಂತಹ ಸೋಂಕಿತ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾದ ನಿಗದಿಪಡಿಸಿದ ಕೋವಿಡ್ -19 ಕೇರ್ ಸೆಂಟರ್ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯ ಬನ್ನಂಜೆ ಉಡುಪಿ. ಈ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಾವೇ ಸ್ವತಃ ಕೋವಿಡ್ -19 ಸೋಂಕು(positive) ಯಾರಿಗಾದರೂ ತಮ್ಮಲ್ಲಿ ದೃಢಪಟ್ಟಿದ್ದರೆ ನಿಮ್ಮ ಕಾಲೇಜಿನ ಪ್ರಾಂಶುಪಾಲರಿಗಾಗಲಿ, ಪರೀಕ್ಷಾ ಕೇಂದ್ರದ ಮುಖ್ಯಸ್ಥರಿರಾಗಲಿ ಅಥವಾ ಉಪ ನಿರ್ದೇಶಕರ ಕಚೇರಿಗೆ ಕಚೇರಿ ದೂರವಾಣಿ ಸಂಖ್ಯೆ 08202575891. ಮುಂಚಿತವಾಗಿ ಮಾಹಿತಿಯನ್ನು ನೀಡಿದರೆ ಅವರಿಗೆ ಪ್ರತ್ಯೇಕವಾದ ಈ ಮೇಲೆ ತಿಳಿಸಿದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿದೆ.

ಆದ್ದರಿಂದ ಪರೀಕ್ಷೆ ಬರೆಯುವ ಸೋಂಕಿತ ವಿದ್ಯಾರ್ಥಿಗಳು ಕೂಡಲೇ ಸಂಬಂಧಪಟ್ಟವರಿಗೆ ನಿಮ್ಮ ಮಾಹಿತಿಯನ್ನು ನೀಡಲು ಈ ಮೂಲಕ ಸೂಚಿಸಲಾಗಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಆಂಬ್ಯುಲೆನ್ಸ್ ಮೂಲಕ ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕರೆತರಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love