ಉಡುಪಿ ಗ್ಯಾಂಗ್ ವಾರ್ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Spread the love

ಉಡುಪಿ ಗ್ಯಾಂಗ್ ವಾರ್ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಉಡುಪಿ: ನಗರದ ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡು ರಸ್ತೆಯಲ್ಲಿ ಎರಡು ತಂಡಗಳು ತಲವಾರು ಹಿಡಿದುಕೊಂಡು ಹೊಡೆದಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.

ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

ಮೇ 20 ರಂದು ರಾತ್ರಿ ನಡೆದ ಘಟನೆಯಾಗಿದ್ದು ಕಾಪು ಕೊಂಬುಗುಡ್ಡೆ ನಿವಾಸಿ ಆಶಿಕ್, ಹೂಡೆ ನಿವಾಸಿ ರಾಕೀಬ್ ಮತ್ತು ಸಕ್ಲೈನ್ ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಮತ್ತೆ ಕಾರ್ಯಾಚರಣೆ ಮುಂದುವರೆಸಿದ ಪೊಲೀಸರು ಇನ್ನೂ ಮೂವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ನ್ಯಾಯಾಲಯವು ಜೂನ್ 1ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಶನಿವಾರ ಹೊಡೆದಾಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ರಾಜ್ಯದಾದ್ಯಂತ ಸಂಚಲನ ಸೃಷ್ಟಿಸಿತ್ತು. ವಿರೋಧ ಪಕ್ಷಗಳಿಂದ ರಾಜ್ಯ ಸರಕಾರದ ವಿರುದ್ದ ವ್ಯಾಪಕ ಟೀಕೆ ಕೂಡ ವ್ಯಕ್ತವಾಗಿತ್ತು.


Spread the love

Leave a Reply