ಉಡುಪಿ ಜಿಲ್ಲಾ ಎಸ್ಪಿಯಾಗಿ ನಿಶಾ ಜೇಮ್ಸ್ ಅಧಿಕಾರ ಸ್ವೀಕಾರ

Spread the love

ಉಡುಪಿ ಜಿಲ್ಲಾ ಎಸ್ಪಿಯಾಗಿ ನಿಶಾ ಜೇಮ್ಸ್ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ನಿಶಾ ಜೇಮ್ಸ್ ಶನಿವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ಎವ ಎಸ್​ಪಿ ಲಕ್ಷ್ಮಣ ನಿಂಬರಗಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಿಶಾ ಜೇಮ್ಸ್​ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ನಿಶಾ ಜೇಮ್ಸ್ 2013ರ ಐಪಿಎಸ್ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ. 2012ರಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆದಿದ್ದ ನಿಶಾ 179ನೇ ರ‌್ಯಾಂಕ್ ಪಡೆದು ಕರ್ನಾಟಕ ಕೇಡರ್‌ಗೆ ನಿಯುಕ್ತರಾಗಿದ್ದರು. ಕೇರಳ ಮೂಲದ ಇವರು ದೆಹಲಿ ವಿಶ್ವವಿದ್ಯಾಲಯದಿಂದ ಎಂಎ ಇಂಗ್ಲಿಷ್​ ಸಾಹಿತ್ಯದ ವಿಷಯದಲ್ಲಿ ಪದವಿ ಪಡೆದಿದ್ದಾರೆ. ತಂದೆ ಖಾಸಗಿ ಸಂಸ್ಥೆ ಉದ್ಯೋಗಿಯಾಗಿದ್ದಾರೆ. ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಯಲ್ಲಿ ಎಎಸ್‌ಪಿ ಆಗಿದ್ದ ನಿಶಾ ಬೆಂಗಳೂರು ಗುಪ್ತಚರ, ರಾಯಚೂರು ಎಸ್‌ಪಿಯಾಗಿ ಕಾರ್ಯನಿರ್ವಹಿಸಿ ಕೆಎಸ್‌ಆರ್‌ಪಿ ಕಮಾಂಡೆಂಟ್ ಹುದ್ದೆಗೆ ವರ್ಗಗೊಂಡಿದ್ದರು.


Spread the love