ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ

Spread the love

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಿಸಿ ಅಖಿಲ ಭಾರತ ಕಾಂಗ್ರೆಸ್ ಪಕ್ಷ ಆದೇಶ ಮಾಡಿದೆ.

ಪಕ್ಷದ ಉಪಾಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದ ಕಿಶನ್ ಹೆಗ್ಡೆಯವರು ಕಳೆದ ಒಂದು ವರ್ಷದ ಹಿಂದೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು.

ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಹೊಸ ಅಧ್ಯಕ್ಷರನ್ನು ಘೋಷಣೆ ಮಾಡಿದ್ದು ಯಾವ ರೀತಿ ಲಾಭವಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಉಡುಪಿ ಸೇರಿದಂತೆ ಏಳು ಜಿಲ್ಲೆಗಳಿಗೆ ನೂತನ ಅಧ್ಯಕ್ಷರು

  • ಬಳ್ಳಾರಿ ನಗರ- ಪ್ರಶಾಂತ್ ಅಲ್ಲಂ ವೀರಭದ್ರಪ್ಪ
  • ಬೆಂಗಳೂರು ಪೂರ್ವ – ಕೆ. ನಂದಕುಮಾರ್
  • ಹಾವೇರಿ – ಸಂಜೀವ್ ಕುಮಾರ್ ನೀರಲಂಗಿ
  • ಕೊಪ್ಪಳ – ಅಮರೇಗೌಡ ಬಯ್ಯಾಪುರ
  • ಉಡುಪಿ – ಕಿಶನ್ ಹೆಗ್ಡೆ ಕೊಳ್ಕೆಬೈಲ್
  • ರಾಯಚೂರು – ಬಸವರಾಜ ಇಟಗಿ
  • ಶಿವಮೊಗ್ಗ – ಪ್ರಸನ್ನ ಕುಮಾರ್

Spread the love