ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಪ್ರಖ್ಯಾತ್ ಶೆಟ್ಟಿ ನೇಮಕ

Spread the love

ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಪ್ರಖ್ಯಾತ್ ಶೆಟ್ಟಿ ನೇಮಕ

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಶಿಫಾರಾಸಿನ ಮೇರೆಗೆ ಪ್ರಖ್ಯಾತ್ ಶೆಟ್ಟಿ ತೆಂಕನಿಡಿಯೂರು ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಇದರ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ.

prakayath-shetty-tenkanidiyoor

ಪ್ರಖ್ಯಾತ್ ಶೆಟ್ಟಿಯವರು ಉಡುಪಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ, ಉಪಾಧ್ಯಕ್ಷರಾಗಿ, ತೆಂಕನಿಡಿಯೂರು ಗ್ರಾಮಪಂಚಾಯತ್ ಉಪಾಧ್ಯಕ್ಷರಾಗಿ, ಹಾಗೂ ಚುನಾವಣಾ ಕೋರ್ ಕಮಿಟಿಯ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.


Spread the love