ಉಡುಪಿ ಜಿಲ್ಲಾ ಗಣರಾಜ್ಯೋತ್ಸವ – ಪೂರ್ವಭಾವಿ ಸಭೆ

Spread the love

ಉಡುಪಿ ಜಿಲ್ಲಾ ಗಣರಾಜ್ಯೋತ್ಸವ – ಪೂರ್ವಭಾವಿ ಸಭೆ

ಉಡುಪಿ : ಜಿಲ್ಲಾ ಮಟ್ಟದಲ್ಲಿ ಜನವರಿ 26ರಂದು ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 26ರಂದು ಪಥಸಂಚಲನವನ್ನು ಇನ್ನಷ್ಟು ಆಕರ್ಷಣೀಯವಾಗಿಸಲು ಸೂಚಿಸಿದರು. ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ 4 ತಂಡಗಳು ಭಾಗವಹಿಸುವುದಾಗಿ ವಿದ್ಯಾಂಗ ಉಪನಿರ್ದೇಶಕ ದಿವಾಕರ ಶೆಟ್ಟಿ ಅವರು ಮಾಹಿತಿ ನೀಡಿದರು.

ವೇದಿಕೆ ಅಲಂಕಾರದ ಹೊಣೆಯನ್ನು ಪೌರಾಯುಕ್ತ ಮಂಜುನಾಥಯ್ಯ ಅವರಿಗೆ ವಹಿಸಲಾಯಿತು. ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಭುವನೇಶ್ವರಿ ಅವರು ಅಲಂಕಾರಿಕ ಹೂಗಿಡಗಳನ್ನು ಒದಗಿಸುವುದಾಗಿ ನುಡಿದರು.

ಆಹಾರದ ವ್ಯವಸ್ಥೆಯನ್ನು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಉಪನಿರ್ದೇಶಕ ಯೋಗೇಶ್ವರ್ ಅವರಿಗೆ ವಹಿಸಲಾಯಿತು. ಇದೇ ಸಂದರ್ಭದಲ್ಲಿ ಅಸಾಧರಣ ಶೌರ್ಯ ಪ್ರಶಸ್ತಿ ವಿಜೇತ ಮಕ್ಕಳಿಗೆ ಪ್ರಶಸ್ತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಗ್ರೇಸಿ ಗೊನ್ಸ್ವಾಲಿಸ್ ಹೇಳಿದರು.

ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಾಗಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದರು.


Spread the love