Home Mangalorean News Kannada News ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಸರ್ಕಾರಿ ಪರೀಕ್ಷಾ ಲ್ಯಾಬ್ ಉದ್ಘಾಟನೆ

ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಸರ್ಕಾರಿ ಪರೀಕ್ಷಾ ಲ್ಯಾಬ್ ಉದ್ಘಾಟನೆ

Spread the love

ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಸರ್ಕಾರಿ ಪರೀಕ್ಷಾ ಲ್ಯಾಬ್ ಉದ್ಘಾಟನೆ

ಉಡುಪಿ : ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಿರುವ, ಕೋವಿಡ್-19 ಸರ್ಕಾರಿ ಪರೀಕ್ಷಾ ಲ್ಯಾಬ್ ನ್ನು ರಾಜ್ಯದ ಮುಜರಾಯಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು, ರಾಜ್ಯದಲ್ಲೇ ಕೊರೋನಾ ಆರಂಭದಲ್ಲಿ ಕೇವಲ ಒಂದು ಪರೀಕ್ಷಾ ಲ್ಯಾಬ್ ಮಾತ್ರ ಇದ್ದು, ಆದರೆ ಈ ಲ್ಯಾಬ್ ನೊಂದಿಗೆ ರಾಜ್ಯದಲ್ಲಿನ ಕೋವಿಡ್ ಪರೀಕ್ಷಾ ಲ್ಯಾಬ್ ಗಳ ಸಂಖ್ಯೆ 82 ಕ್ಕೇರಿದೆ.
ಜಿಲ್ಲೆಯಲ್ಲಿ ಮೊದಲು ಟೆಸ್ಟಿಂಗ್ ಗಾಗಿ ಮಂಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳನ್ನು ಅವಲಂಬಿಸಬೇಕಿತ್ತು, ಈಗ ಇಲ್ಲಿಯೇ ಲ್ಯಾಬ್ ಆರಂಬಿಸಿರುವುದರಿAದ ಇನ್ನು ಮುಂದೆ ಇಲ್ಲಿಯೇ ಶೀಘ್ರದಲ್ಲಿ ವರದಿ ಪಡೆಯಬಹುದಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 1390 ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಬಂದಿದು, ಅದರಲ್ಲಿ ಮಹಾರಾಷ್ಟçದಿಂದ ಬಂದವರ ಸಂಖ್ಯೆಯೇ 1100 ಮೀರಿದೆ, ಹೊರ ರಾಜ್ಯ, ದೇಶಗಳಿಂದ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುವವರಿಗಾಗಿ, ಇಲ್ಲಿ ಲ್ಯಾಬ್ ನ ಆರಂಭಿಸಬೇಕಾದ ಅವಶ್ಯಕತೆ ಮನಗಂಡು ಮಾನ್ಯ ಮುಖ್ಯಮಂತ್ರಿಗಳು ಈ ಲ್ಯಾಬ್ ನ್ನು ಉಡುಪಿ ಜಿಲ್ಲೆಗೆ ವಿಶೇಷವಾಗಿ ಮಂಜೂರು ಮಾಡಿದ್ದಾರೆ ಎಂದು ಸಚಿವ ಕೋಟ ತಿಳಿಸಿದರು.

ಕೋರೋನಾ ನಿಯಂತ್ರಣ ಮತ್ತು ನಿರ್ವಹಣೆ ಕುರಿತಂತೆ , ಉಡುಪಿ ಜಿಲ್ಲಾಡಳಿತ ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಇದಕ್ಕಾಗಿ , ಜಿಲ್ಲೆಯ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು ಮತ್ತು ವಿಶೇಷವಾಗಿ ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್-19 ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ವಿಳಂಬವಾಗದಿರದAತೆ ರೂಪಿಸಿರುವ, ಅಂಬುಲೆನ್ಸ್ ಮಾನಿಟರಿಂಗ್ ಸಿಸ್ಟಂ ಯೋಜನೆಯನ್ನು ಶಾಸಕ ಸುನೀಲ್ ಕುಮಾರ್ ಉದ್ಘಾಟಿಸಿದರು. ಈ ಯೋಜನೆಗಾಗಿ ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಅಂಬುಲೈನ್ಸ್ ಗಳಿಗೆ ಜಿ.ಪಿಎಸ್. ಅಳವಡಿಸಿದ್ದು, ಅಂಬುಲೆನ್ಸ್ ಗಳು ಯಾವ ಸ್ಥಳದಲ್ಲಿವೆ ಎಂಬ ಮಾಹಿತಿ ಬೆರಳ ತುದಿಯಲ್ಲಿಯೇ ದೊರೆಯಲಿದ್ದು, ಇದರಿಂದ ಕೋವಿಡ್ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲು ವಿಳಂಬಕ್ಕೆ ಆಸ್ಪದ ನೀಡದಂತೆ ಸಮೀಪದ ಆಂಬುಲೆನ್ಸ್ ಬಳಸಿಕೊಳ್ಳಬಹುದಾಗಿದ್ದು, ರಾಜ್ಯದಲ್ಲೇ ಈ ಯೋಜನೆ ಪ್ರಥಮವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯಲ್ಲಿನ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ಬೆಡ್ ಗಳ ಕುರಿತು ಮಾಹಿತಿ ನೀಡಲು ರೂಪಿಸಿರುವ ಬೆಡ್ ಮ್ಯಾನೇಜ್ ಮೆಂಟ್ ಸಿಸ್ಟಂ ನ್ನು ಶಾಸಕ ರಘುಪತಿ ಭಟ್ ಉದ್ಘಾಟಿಸಿದರು. ಈ ಯೋಜನೆಯ ಪ್ರಕಾರ ಜಿಲ್ಲೆಯಲ್ಲಿನ ಕೊರೋನಾ ರೋಗಿಗೆ ಆತನಿಗೆ ಸಮೀಪದ ಯಾವ ಆಸ್ಪತ್ರೆಯಲ್ಲಿ ಎಷ್ಟು ಬೆಡ್ ಗಳು ರೋಗಿಗಳಿಗೆ ಖಾಲಿ ಇವೆ, ಏನು ಅಗತ್ಯ ಸೌಲಭ್ಯಗಳಿವೆ ಎಂಬ ಮಾಹಿತಿ ದೊರೆಯಲಿದೆ.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ , ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಡಿಹೆಚ್‌ಓ ಡಾ.ಸುಧೀರ್ ಚಂದ್ರ ಸೂಡಾ, ಕೋವಿಡ್-19 ಜಿಲ್ಲಾ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ , ಆರೋಗ್ಯ ಇಲಾಖೆಯ ಅಧಿಕಾರಿಗಳು , ಮತ್ತಿತರರು ಉಪಸ್ಥಿತರಿದ್ದರು.


Spread the love

Exit mobile version