ಉಡುಪಿ ಜಿಲ್ಲೆಯಲ್ಲಿ ತಗ್ಗಿದ ಕೊರೋನಾ ; ಬುಧವಾರ 4 ಮಂದಿಗೆ ಪಾಸಿಟಿವ್ ದೃಢ

Spread the love

ಉಡುಪಿ ಜಿಲ್ಲೆಯಲ್ಲಿ ತಗ್ಗಿದ ಕೊರೋನಾ ; ಬುಧವಾರ 4 ಮಂದಿಗೆ ಪಾಸಿಟಿವ್ ದೃಢ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಬುಧವಾರ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡಿದ್ದು 4 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1039 ಕ್ಕೆ ಏರಿಕೆಯಾಗಿದೆ.

ಬುಧವಾರ ಪತ್ತೆಯಾದ ಪ್ರಕರಣಗಳಲ್ಲಿ ಮೂವರು ಮಹಾರಾಷ್ಟ್ರದಿಂದ ಬಂದವರಾಗಿದ್ದು ಒರ್ವರಿಗೆ P-7567 ಸಂಪರ್ಕದಿಂದ ಪಾಸಿಟಿವ್ ದೃಢಪಟ್ಟಿದೆ. ಸೋಂಕಿತರಲ್ಲಿ ಇಬ್ಬರು ಪುರುಷರು, ಒರ್ವ ಮಹಿಳೆ ಮತ್ತು 9 ವರ್ಷದ ಬಾಲಕ ಸೇರಿದ್ದಾರೆ.

ಎಲ್ಲಾ ಸೋಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ


Spread the love