Home Mangalorean News Kannada News ಉಡುಪಿ ಜಿಲ್ಲೆಯಲ್ಲಿ  ಬುಧವಾರ 31 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ ಜಿಲ್ಲೆಯಲ್ಲಿ  ಬುಧವಾರ 31 ಮಂದಿಗೆ ಕೊರೋನಾ ಪಾಸಿಟಿವ್

Spread the love

ಉಡುಪಿ ಜಿಲ್ಲೆಯಲ್ಲಿ  ಬುಧವಾರ 31 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು  31 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1421 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಮಹಾರಾಷ್ಟ್ರದಿಂದ ಬಂದ 7 ಮಂದಿ, ಅಬುದಾಬಿಯಿಂದ ಬಂದ ಒರ್ವರು, ಮಸ್ಕತ್ ನಿಂದ ಬಂದ 2 ಮಂದಿ ಹಾಗೂ ಹೊರಜಿಲ್ಲೆಯಿಂದ ಬಂದ 9 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಅಲ್ಲದೆ ಪ್ರಾಥಮಿಕ ಸಂಪರ್ಕದಿಂದ ಉಡುಪಿಯ 12 ಜನಕ್ಕೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ.

ಒಟ್ಟು 31 ಮಂದಿ ಸೋಂಕಿತರಲ್ಲಿ 20 ಮಂದಿ ಉಡುಪಿ, 7 ಮಂದಿ ಕುಂದಾಪುರ ಮತ್ತು 4 ಮಂದಿ ಕಾರ್ಕಳ ತಾಲೂಕಿಗೆ ಸೇರಿದವರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ

ಈ ವರೆಗೆ ಒಟ್ಟು 1189 ಮಂದಿ ಕೋರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು ಸದ್ಯ ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 229 ಸಕ್ರಿಯ ಪ್ರಕರಣಗಳಿವೆ ಎಂದು ಅವರು ತಿಳಿಸಿದ್ದಾರೆ

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.


Spread the love

Exit mobile version