Home Mangalorean News Kannada News ಉಡುಪಿ ಜಿಲ್ಲೆಯಲ್ಲಿ ಭಾನುವಾರ 40 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ ಜಿಲ್ಲೆಯಲ್ಲಿ ಭಾನುವಾರ 40 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಉಡುಪಿ ಜಿಲ್ಲೆಯಲ್ಲಿ ಭಾನುವಾರ 40 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೋನಾ ಹಾವಳಿ ಮುಂದುವರೆದಿದ್ದು, ಭಾನುವಾರ ಮತ್ತೆ 40 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1139 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ 18 ಪುರುಷರು, 15 ಮಹಿಳೆಯರು ಮತ್ತು 6 ಮಕ್ಕಳು ಸೇರಿದ್ದಾರೆ. ಸೋಂಕಿತರಲ್ಲಿ 15 ಮಂದಿ ಮಹಾರಾಷ್ಟ್ರದಿಂದ ವಾಪಾಸಾದವರಾಗಿದ್ದು, 2 ಬೆಂಗಳೂರು, 1 ಬಾಗಲಕೋಟೆಗೆ ಪ್ರಯಾಣ ಮಾಡಿದವರಾಗಿದ್ದಾರೆ. 6 ಮಂದಿ ಕೊರೊನಾ ವಾರಿಯರ್ಸ್ ಮತ್ತು 16 ಮಂದಿ ಕೊರೋನಾ ಪಾಸಿಟಿವ್ ಬಂದವರ ಪ್ರಾಥಮಿಕ ಸಂಪರ್ಕದಿಂದ ಸೋಂಕು ಹರಡಿದೆ. ಇದರಲ್ಲಿ ಕಾಪುವಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಕೂಡ ಸೇರಿದ್ದಾರೆ

ಈವರೆಗೆ ಒಟ್ಟು 1051 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು,ಸದ್ಯ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ 126 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ


Spread the love

Exit mobile version