ಉಡುಪಿ ಜಿಲ್ಲೆಯಲ್ಲಿ ಭಾನುವಾರ 41 ಮಂದಿಗೆ ಕೊರೋನಾ ಪಾಸಿಟಿವ್

Spread the love

ಉಡುಪಿ ಜಿಲ್ಲೆಯಲ್ಲಿ ಭಾನುವಾರ 41 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ ಒಟ್ಟು 41 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1608 ಕ್ಕೆ ಏರಿಕೆಯಾಗಿದೆ.

ಸೊಂಕಿತರಲ್ಲಿ 2 ಮಂದಿ ಮುಂಬೈ ಸಂಪರ್ಕ ಹೊಂದಿದ್ದರೆ, ಒಬ್ಬರು ಸೌದಿಯಿಂದ ವಾಪಾಸಾಗಿದ್ದು, 32 ಮಂದಿ ಪ್ರಾಥಮಿಕ ಸಂಪರ್ಕದಿಂದ ಹಾಗು 6 ಮಂದಿಗೆ ಅಂತರ್ ಜಿಲ್ಲಾ ಪ್ರವಾಸದಿಂದ ಸೋಂಕು ದೃಢಗೊಂಡಿದೆ

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಈ ವರೆಗೆ ಒಟ್ಟು 1273 ಮಂದಿ ಕೋರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು ಸದ್ಯ ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 332 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ


Spread the love