Home Mangalorean News Kannada News ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ- ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ- ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಣೆ

Spread the love

ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ- ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಇಂದು ಮತ್ತು ನಾಳೆ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಗಾಳಿ ಮಳೆಯ ಹಿನ್ನಲೆಯಲ್ಲಿ ಮೇ 29 ಮತ್ತು ಮೇ 30 ರಂದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.


Spread the love

Exit mobile version