ಉಡುಪಿ ಜಿಲ್ಲೆಯಲ್ಲಿ ಮತ್ತೆ 9 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಉಡುಪಿ ಜಿಲ್ಲೆಯಲ್ಲಿ ಮತ್ತೆ 9 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 9 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1206 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ 3 ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದು ಇಬ್ಬರು ಬೆಂಗಳೂರು ಮತ್ತು ಒರ್ವ ವ್ಯಕ್ತಿ ತೆಲಂಗಾಣ ಪ್ರಯಾಣ ಮಾಡಿದವರಲ್ಲಿ ಸೋಂಕು ದೃಢಗೊಂಡಿದೆ. ಅಲ್ಲದೆ ಪಾಸಿಟಿವ್ ಬಂದ ರೋಗಿಗಳ ಪ್ರಾಥಮಿಕ ಸಂಪರ್ಕದಿಂದ ಮೂವರಿಗೆ ಸೋಂಕು ಹರಡಿದೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ


Spread the love