ಉಡುಪಿ ಜಿಲ್ಲೆಯಲ್ಲಿ ಶನಿವಾರ 90 ಮಂದಿಗೆ ಕೊರೋನಾ ಪಾಸಿಟಿವ್

Spread the love

ಉಡುಪಿ ಜಿಲ್ಲೆಯಲ್ಲಿ ಶನಿವಾರ 90 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಒಟ್ಟು 90 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1567 ಕ್ಕೆ ಏರಿಕೆಯಾಗಿದೆ.
ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ಈ ವರೆಗೆ ಒಟ್ಟು 1245 ಮಂದಿ ಕೋರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು ಸದ್ಯ ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 319 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ


Spread the love