ಉಡುಪಿ ಜಿಲ್ಲೆಯಲ್ಲಿ ಶನಿವಾರ ಮತ್ತೆ 109 ಮಂದಿಗೆ ಕೋರೊನಾ ಪಾಸಿಟಿವ್

Spread the love

ಉಡುಪಿ ಜಿಲ್ಲೆಯಲ್ಲಿ 2 ಸಾವಿರದ ಗಡಿ ದಾಟಿದ ಕೋರೊನಾ ಸೋಕಿಂತರು – ಮತ್ತೆ 109 ಮಂದಿಗೆ ಪಾಸಿಟಿವ್ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ಶತಕ ದಾಟಿದ್ದು ಒಟ್ಟು 109 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2088 ಕ್ಕೆ ಏರಿಕೆಯಾಗಿದೆ.

ಶನಿವಾರ ಪತ್ತೆಯಾದ ಸೋಂಕಿತರಲ್ಲಿ 58 ಮಂದಿ ಉಡುಪಿ ತಾಲೂಕು, 40 ಮಂದಿ ಕುಂದಾಪುರ ಹಾಗೂ 11 ಮಂದಿ ಕಾರ್ಕಳ ತಾಲೂಕಿನವರು ಸೇರಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

ಶನಿವಾರ 524 ಮಂದಿಯ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸ ಲಾಗಿದೆ. 537 ವರದಿಗಳು ಬರುವುದು ಬಾಕಿ ಇದೆ. ಶೀತಜ್ವರ, ತೀವ್ರ ಉಸಿರಾಟದ ಸಮಸ್ಯೆ ಹಾಗೂ ಕೋವಿಡ್ ಲಕ್ಷಣಗಳು ಕಂಡುಬಂದ 50 ಜನರನ್ನು ಐಸೊಲೇಷನ್ ವಾರ್ಡ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಇದುವರೆಗೂ 1586 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 492 ಸಕ್ರಿಯ ಪ್ರಕರಣಗಳು ಮಾತ್ರ ಬಾಕಿ ಇವೆ. , ಇದುವರೆಗೂ 9 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.


Spread the love