ಉಡುಪಿ ಜಿಲ್ಲೆಯಲ್ಲಿ ಸಿ.ಆರ್.ಝೆಡ್. ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಹಸಿರು ನಿಶಾನೆ

Spread the love

ಉಡುಪಿ ಜಿಲ್ಲೆಯಲ್ಲಿ ಸಿ.ಆರ್.ಝೆಡ್. ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಹಸಿರು ನಿಶಾನೆ

ಉಡುಪಿ: ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಗೆ ಒಳಪಡುವ (ಸಿಆರ್ ಝೆಡ್) ಉಡುಪಿ ಹಾಗೂ ಬ್ರಹ್ಮಾವರ ತಾಲ್ಲೂಕುಗಳಲ್ಲಿ ಮರಳು ದಿಬ್ಬಗಳ ತೆರವಿಗೆ ಅನುಮತಿ ಸಿಕ್ಕಿದೆ.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿರುವ ಉಡುಪಿ ಜಿಲ್ಲಾ ಹಿರಿಯ ಭೂ ವಿಜ್ಞಾನಿ ಅನುಷ್ಠಾನಾಧಿಕಾರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅವರು 2018-19ನೇ ಸಾಲಿನ ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಯ ಉಡುಪಿ ಹಾಗೂ ಬ್ರಹ್ಮಾವರ ತಾಲೂಕಿನ ವ್ಯಾಪ್ತಿಯಲ್ಲಿ ಗುರುತಿಸಿರುವ ಮರಳು ದಿಬ್ಬಗಳಿಗೆ ಕರ್ನಾಟಕ ರಾಜ್ಯ ಕರಾವಳಿ ವಲಯ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಬೆಂಗಳೂರು ಅನುಮೋದನೆ ನೀಡಿದ್ದು, ಮರಳು ದಿಬ್ಬಗಳ ಪಟ್ಟಿಯನ್ನು ಹಿರಿಯ ಭೂ ವಿಜ್ಞಾನಿಯವರ ಕಚೇರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಡುಪಿ ನಾಮಫಲಕದಲ್ಲಿ ಪ್ರಕಟಿಸಲಾಗಿದೆ ಹಾಗೂ ಅರ್ಹ ಪರವಾನಿಗೆದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಉಡುಪಿ ಹಾಗೂ ಬ್ರಹ್ಮಾವರ ತಾಲ್ಲೂಕುಗಳಲ್ಲಿ 9 ಮರಳು ದಿಬ್ಬಗಳನ್ನು ಗುರುತಿಸಿ ಇಲಾಖೆಗೆ ಪ್ರಸ್ತಾವ ಕಳುಹಿಸಲಾಗಿತ್ತು. ಅದರಲ್ಲಿ 7 ದಿಬ್ಬಗಳ ತೆರವಿಗೆ ಮಾತ್ರ ಒಪ್ಪಿಗೆ ಸಿಕ್ಕಿದೆ. ಯಾವ ಜಾಗದಲ್ಲಿ ಮರಳು ತೆಗೆಯಬಹುದು ಎಂಬ ವಿವರವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಯ ನಾಮಫಲಕದಲ್ಲಿ ಹಾಕಲಾಗಿದೆ.

2011ಕ್ಕಿಂತ ಹಿಂದೆ ಮರಳು ತೆಗೆಯಲು ಅರ್ಹ ಪರವಾನಗಿ ಹೊಂದಿರುವವರ ಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ. ಅ.27ರ ಸಂಜೆ 5ರವರೆಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಹಾಕಲು ಸಮಯ ನೀಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love