Home Mangalorean News Kannada News ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಬಕ್ರೀದ್’ ಆಚರಣೆ

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಬಕ್ರೀದ್’ ಆಚರಣೆ

Spread the love

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಬಕ್ರೀದ್’ ಆಚರಣೆ

ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಶನಿವಾರ ಸಂಭ್ರಮ ಸಡಗರದಿಂದ ಆಚರಿಸಿದರು.

ನಗರದ ಬ್ರಹ್ಮಗಿರಿ ಹಾಶಿಮಿ ಮಸೀದಿಯಲ್ಲಿ ಪ್ರಾರ್ಥನೆಯ ಬಳಿಕ ಸಂದೇಶ ನೀಡಿದ ಇಮಾಮರಾದ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ಮಾತನಾಡಿ ಸಾಮಾಜಿಕ ಜಾಲ ತಾಣವನ್ನು ದುರುಪಯೋಗಪಡಿಸದಂತೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಬೇರೆ ಸಮಾಜವನ್ನು ನಿಂದಿಸುವುದು ಅಥವಾ ಅವಹೇಳನಕಾರಿ ಪೋಸ್ಟ್ ಹಾಕದಂತೆ ಎಚ್ಚರಿಕೆ ವಹಿಸಬೇಕು. ಯುವ ಸಮುದಾಯ ಡ್ರಗ್ಸ್ ಸೇವನೆಯಿಂದ ಹಾಳಾಗುತ್ತಿದ್ದು ಈ ಬಗ್ಗೆ ಹೆತ್ತವರು ತಮ್ಮ ಮಕ್ಕಳನ್ನು ಇಂತಹ ವಿಷ ಪದಾರ್ಥದಿಂದ ದೂರ ಇರಲು ಸಲಹೆ ನೀಡಿದರು. ಅಲ್ಲದೆ ಪ್ರತಿಯೊಬ್ಬರು ಸಮಾಜದಲ್ಲಿ ಪ್ರೀತಿ, ಸೌಹಾರ್ದತೆ ಹಾಗೂ ಶಾಂತಿಯ ಮಾರ್ಗವನ್ನು ಅನುಸರಿಸಬೇಕೆಂದು ಕರೆ ಕೊಟ್ಟರು.

ಈದ್ ಅಲ್ ಅಧಾ ನಮಾಜ್ ಮಾಡಲು ಮಹಿಳಳೆಯರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು

ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ಹಾಗೂ ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು
ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.

ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು.
ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಉಡುಪಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು


Spread the love

Exit mobile version