Home Mangalorean News Kannada News ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ ಕೆ ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ ಕೆ ಅಧಿಕಾರ ಸ್ವೀಕಾರ

Spread the love

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ ಕೆ ಅಧಿಕಾರ ಸ್ವೀಕಾರ

ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ ಕೆ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮನ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಮಂಗಳವಾರ ಸಂಜೆ ರಾಜ್ಯ ಸರಕಾರ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರನ್ನು ವರ್ಗಾವಣೆಗೊಳಿಸಿ 2012 ನೇ ಬ್ಯಾಚಿನ ಐಎ ಎಸ್ ಅಧಿಕಾರಿ ಸ್ವರೂಪ ಟಿ ಕೆ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿತ್ತು.

ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಎಎಸ್ಪಿ ಕಾರ್ಕಳ ಹರ್ಷಂ ಪ್ರಿಯಂ ವಧಾ, ಕುಂದಾಪುರ ಸಹಾಯಕ ಕಮೀಷನರ್ ರಶ್ಮೀ ಹಾಗೂ ಇತರರು ಉಪಸ್ಥೀತರಿದ್ದರು

ಟೈಕ್ಸ್ಟೈಲ್ ಇಂಜಿನಿಯರಿಂಗ್ನಲ್ಲಿ ಐಐಟಿ ದಿಲ್ಲಿಯಿಂದ ಎಂಟೆಕ್ ಪದವಿ ಪಡೆದಿರುವ ಸ್ವರೂಪ ಅವರು 2025ರ ಫೆಬ್ರವರಿಯಿಂದ ಆರ್ಡಿಪಿಆರ್ ಇಲಾಖೆಯಲ್ಲಿ ಇ-ಗವರ್ನೆನ್ಸ್ನ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ. ಅದಕ್ಕೆ ಮುನ್ನ ಅವರು ಧಾರವಾಡ ಜಿಲ್ಲಾ ಪಂಚಾಯತ್ನಲ್ಲಿ ಸಿಇಓ ಹಾಗೂ ನೇಶನಲ್ ರೂರಲ್ ಲೈಲ್ಲಿಹುಡ್ ಮಿಷನ್ನ ಸಿಓಓ ಹಾಗೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದರು.

2023ರ ಜುಲೈ 14ರಿಂದ ಉಡುಪಿಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಡಾ.ವಿದ್ಯಾಕುಮಾರಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದ್ದು, ಯಾವುದೇ ಹುದ್ದೆಯನ್ನು ತೋರಿಸಿಲ್ಲ.


Spread the love

Exit mobile version