ಉಡುಪಿ ಜಿಲ್ಲೆಯ ವಿವಿಧೆಡೆ ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

Spread the love

ಉಡುಪಿ ಜಿಲ್ಲೆಯ ವಿವಿಧೆಡೆ ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಉಡುಪಿ: ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಶಿಕ್ಷಕರ ದಿನಾಚರಣೆಯನ್ನು ಉಡುಪಿ ಜಿಲ್ಲೆಯ ವಿವಿಧೆಡೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬ್ರಹ್ಮಾವರ ವಲಯ ಮತ್ತು ಶಿಕ್ಷಕರ ದಿನಾಚರಣೆಯ ಆಚರಣೆ ಸಮಿತಿ ಬ್ರಹ್ಮಾವರ ಇವರುಗಳ ಸಂಯುಕ್ತ ಆಶ್ರಯದಲ್ಲಿ ವತಿಯಿಂದ ನಡೆದ “ಶಿಕ್ಷಕರ ದಿನಾಚರಣೆ 2018” ಕಾರ್ಯಕ್ರಮ ಬ್ರಹ್ಮಾವರದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಅವರು ಶಿಕ್ಷಕರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ನಗರದ ಮಲಬಾರ್ ಗೋಲ್ಡ್ & ಡೈಮಂಡ್ ವತಿಯಿಂದ ಕೂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಜಯವಿಜಯ ಕುಮಾರಿ, ಕುದಿ ವಸಂತ್ ಶೆಟ್ಟಿ, ರಾಜಾರಾಮ್, ಪ್ರೋ. ಗಣೇಶ್ ಬಿಜೈ ಮತ್ತು ಬಾಲಗಂಗಾಧರ ಶೆಟ್ಟಿ ಇವರುಗಳನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಈ ವೇಳೆ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಉಡುಪಿ ನಗರ ಸಭೆಯ ಪೌರಾಯುಕ್ತ ಜನಾರ್ದನ್, ನೂತನ ಕೌನ್ಸಿಲರ್ ಮಾನಸ ಚಿದಾನಂದ ಪೈ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ, ಸಂಸ್ಥೆಯ ಹಫೀಜ್  ಉಪಸ್ಥಿತರಿದ್ದರು.

ಕಾರ್ಕಳದ ಜ್ಞಾನಸುಧಾ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು ಹಾಗೂ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.

ಈ ವೇಳೆ ಮಾತನಾಡಿದ ಡಾ|ಪ್ರಸನ್ನ ಹೆಗ್ಡೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರೇರಕ ಶಕ್ತಿಯಾಗಬೇಕು. ವಿದ್ಯಾರ್ಥಿಗಳ ಭವ್ಯ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳಾಗಬೇಕು. ವಿದ್ಯಾರ್ಥಿಗಳು ಎಲ್ಲಾ ಸಂದರ್ಭಗಳಲ್ಲಿ ಶಿಕ್ಷಕರ ಮಾರ್ಗದರ್ಶನ, ಸಲಹೆ ಸೂಚನೆಗಳಿಂದ ಹಿಂದೆ ಸರಿಯದೆ ದೇವರ ಮೂರ್ತಿಗಳಾಗಿ ಪೂಜಿಸಲರ್ಹರಾಗಬೇಕು ಎಂದರು.

ಈ ಸಂದರ್ಭದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಂಡಾಜೆಯ ನಿವೃತ್ತ ಮುಖ್ಯ ಶಿಕ್ಷಕರಾದ ಕೆ.ಉಮೇಶ್ ಭಟ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಲ್ಲಿಕಾರಿನ ನಿವೃತ್ತ ಶಿಕ್ಷಕಿ ಶ್ರೀಮತಿ ವಿಮಲಾ ಸುದರ್ಶನ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡಬಿದ್ರೆಯ ನಿವೃತ್ತ ಶಿಕ್ಷಕಿ ಶ್ರೀಮತಿ ಬಿ.ಸರಸ್ವತಿ ಈ ಮೂವರನ್ನು ಸಮಸ್ತ ಶಿಕ್ಷಕರ ಪರವಾಗಿ ಸನ್ಮಾನಿಸಿ, ಆರತಿ ಬೆಳಗಿ, ಆಶೀರ್ವಾದ ಪಡೆಯಲಾಯಿತು.

ಈ ಕಾರ್ಯಕ್ರಮದಲ್ಲಿ ಅಜೆಕಾರು ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ,ಇವರ ಧರ್ಮಪತ್ನಿ ವಿದ್ಯಾವತಿ ಸುಧಾಕರ್ ಶೆಟ್ಟಿ, ಸಂಸ್ಥೆಯ ಹಿತಚಿಂತಕರಾದ ಪಾಂಡುರಂಗ ರಾವ್,ಟ್ರಸ್ಟಿಗಳಾದ ಕರುಣಾಕರ್ ಶೆಟ್ಟಿ,ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರು, ಉಪಪ್ರಾಂಶುಪಾಲರಾದ ಸಾಹಿತ್ಯ ಮುಂತಾದವರು ಉಪಸ್ಥಿತರಿದ್ದರು. ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆಯಾದ ವಾಣಿ ಕೆ ಇವರು ಸ್ವಾಗತಿಸಿ, ಶಿಕ್ಷಕಿ ಕುಮಾರಿ ಪವಿತ್ರ ಟಿ ಇವರು ವಂದಿಸಿ, ಶಿಕ್ಷಕಿ ಕುಮಾರಿ ಶಿಲ್ಪಾ ಇವರು ಕಾರ್ಯಕ್ರಮ ನಿರೂಪಿಸಿದರು.


Spread the love