ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿಜೆಪಿಯ ಸುಳ್ಳಿನ ಪ್ರತಿಭಟನೆಯ ವಿರುದ್ಧ ಸತ್ಯದರ್ಶನ ಪ್ರತಿಭಟನೆ
ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಬ್ಲಾಕ್ ವ್ಯಾಪ್ತಿಯ ತೆಂಕನಿಡಿಯೂರು, ಕಡೆಕಾರ್, ಅಂಬಲಪಾಡಿ, ಬಡಾನಿಡಿಯೂರು ಗ್ರಾಮ ಪಂಚಾಯತ್ನ ಮುಂಭಾಗದಲ್ಲಿ ಬಿಜೆಪಿಯ ಸುಳ್ಳಿನ ಪ್ರತಿಭಟನೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಸತ್ಯದರ್ಶನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ತೆಂಕನಿಡಿಯೂರು ಗ್ರಾಮ ಪಂಚಾಯತ್
ತೆಂಕನಿಡಿಯೂರಿನ ಪ್ರತಿಭಟನೆಯಲ್ಲಿ ಮಾತನಾಡಿದ ಉಡುಪಿ ವಿಧಾನಸಭಾ ಕಾಂಗ್ರೆಸ್ ಪಕ್ಷದ ನಾಯಕ ಪ್ರಸಾದ್ ರಾಜ್ ಕಾಂಚನ್ ಅವರು ದೇಶದಲ್ಲಿಯೇ ಅತ್ಯಂತ ಹೆಚ್ಚು ಜಿ.ಎಸ್.ಟಿ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದ್ದು ಕೇಂದ್ರದಿಂದ ಬರುವ ಜಿ.ಎಸ್.ಟಿ ಪಾಲು ಕುಂಠಿತವಾಗಿದ್ದು ಇದರಿಂದ ಕರ್ನಾಟಕ ರಾಜ್ಯಕ್ಕೆ ತುಂಬ ಅನ್ಯಾಯವಾಗುತ್ತಿದ್ದು ಇಲ್ಲಿನ ರಾಜ್ಯದ ಬಿಜೆಪಿ ಸಂಸದರು ಹಾಗೂ ಶಾಸಕರು ಈ ಮಲತಾಯಿ ಧೋರಣೆಯ ವಿರುದ್ಧ ಮೊದಲು ಧ್ವನಿ ಎತ್ತಲಿ. ಭೂ ಸುಧಾರಣಾ ಕಾನೂನು, ಬ್ಯಾಂಕ್ ರಾಷ್ಟ್ರೀಕರಣ, ಆಹಾರ ಭದ್ರತಾ ಕಾಯ್ದೆಯ ಮೂಲಕ ಜನಸಾಮಾನ್ಯರ ಬದುಕಿನಲ್ಲಿ ಹೊಸ ಭರವಸೆಯನ್ನು ಮೂಡಿಸಿರುವುದು ಕಾಂಗ್ರೆಸ್ ಪಕ್ಷ. ಇಲ್ಲಿನ ಸ್ಥಳೀಯ ಶಾಸಕರು ಹಾಗೂ ಸಂಸದರು ಪ್ರಥಮವಾಗಿ ತಮ್ಮ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಗಮನವಿಡಲಿ ಎಂದು ಆಗ್ರಹಿಸಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷದ ಜನಪರ ಕಾರ್ಯಕ್ರಮಗಳನ್ನು ನೆನಪಿಸಿದರು. ಗ್ರಾಮ ಪಂಚಾಯತ್ನಲ್ಲಿ ಹಲವಾರು ಯೋಜನೆಗಳನ್ನು ತಂದದ್ದು ಕಾಂಗ್ರೆಸ್ ಪಕ್ಷ. ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರು ತಮ್ಮ ದ್ವೇಷ ರಾಜಕಾರಣವನ್ನು ಬಿಟ್ಟು ಇನ್ನಾದರೂ ಅಭಿವೃದ್ಧಿಗೆ ತಮ್ಮ ಸಮಯ ಕೊಡಲಿ ಎಂದು ತಿಳಿಸಿದರು.
ಈ ಪ್ರತಿಭಟನಾ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಹರೀಶ್ ಕಿಣಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಮಹಾಬಲ ಕುಂದರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ನಾಯ್ಕ್, ಗ್ರಾಮ ಪಂಚಾಯತ್ ಸದಸ್ಯರಾದ ರವಿರಾಜ್, ಶರತ್ ಶೆಟ್ಟಿ, ಅನುಷಾ ಆಚಾರ್ಯ, ವಿನಯಾ ಆಚಾರ್ಯ, ಸತೀಶ್ ನಾಯ್ಕ್, ಸುರೇಶ್ ನಾಯಕ್, ಪೃಥ್ವಿರಾಜ್ ಶೆಟ್ಟಿ, ಕಾಂಗ್ರೆಸ್ ಪಕ್ಷದ ನಾಯಕರಾದ ಸುರೇಶ್ ಶೆಟ್ಟಿ ಬಡಾನಿಡಿಯೂರು, ಯತೀಶ್ ಕರ್ಕೇರ, ಯುವರಾಜ್ ಪುತ್ತೂರು, ಧನಂಜಯ್ ಕುಂದರ್, ಆನಂದ್ ಪೂಜಾರಿ, ಸದಾನಂದ್ ಕುಲಾಲ್, ಸುರೇಶ್ ಶೆಟ್ಟಿ, ಗಣೇಶ್ ನೆರ್ಗಿ, ಸತೀಶ್ ಕೊಡವೂರು, ಸತೀಶ್ ಮಂಚಿ, ಭರತ್ , ಅರ್ಚನಾ, ಸುಪ್ರಿತಾ, ಯಾಧವ್ ಅಮೀನ್, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬೂತ್ ಸಮಿತಿಯ ಅಧ್ಯಕ್ಷರು, ಬಿ.ಎಲ್.ಏ-2ಗಳು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
ಬಡಾನಿಡಿಯೂರು ಗ್ರಾಮ ಪಂಚಾಯತ್
ಬಡಾನಿಡಿಯೂರು ಗ್ರಾಮ ಪಂಚಾಯತ್ ಎದುರು ನಡೆದ ಪ್ರತಿಭಟನೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಅವರು ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಜನಸಾಮಾನ್ಯರಿಗೆ ಈ ಯೋಜನಗಳಿಂದ ಬಹಳ ಪ್ರಯೋಜನೆಯಾಗಿದೆ ಎಂದು ತಿಳಿಸಿ ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆರ್ಥಿಕ ತಜ್ಞರು. ದಾಖಲೆಯ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಲು ಬಿಜೆಪಿಗರಿಗೆಯಾವ ನೈತಿಕತೆ ಇಲ್ಲ. ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಯಾಕೆ ತಿಳಿಸುತ್ತಿದ್ದೀರ ಎಂದು ಪ್ರಶ್ನಿಸಿದರು.
ಈ ಪ್ರತಿಭಟನಾ ಸಭೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ನಾಯಕರಾದ ಪ್ರಸಾದ್ ರಾಜ್ ಕಾಂಚನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಹರೀಶ್ ಕಿಣಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಮಹಾಬಲ ಕುಂದರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಕಾಂಗ್ರೆಸ್ ಪಕ್ಷದ ನಾಯಕರಾದ ಸುರೇಶ್ ಶೆಟ್ಟಿ ಬಡಾನಿಡಿಯೂರು, ಯುವರಾಜ್ ಪುತ್ತೂರು, ಕಿರಣ್ ಕುಂದರ್, ರಾಮಪ್ಪ ಸಾಲ್ಯಾನ್, ಬಂಧು ಕಾಂಚನ್, ಜಗದೀಶ್ ಸುವರ್ಣ, ವನಿತಾ ಫೆರ್ನಾಂಡೀಸ್, ಪುಷ್ಪಾ ಕುಂದರ್, ವಿಲ್ಮಾ ಫೆರ್ನಾಂಡೀಸ್, ಆನಂದ್ ಪೂಜಾರಿ, ಸದಾನಂದ್ ಕುಲಾಲ್, ಸುರೇಶ್ ಶೆಟ್ಟಿ, ಗಣೇಶ್ ನೆರ್ಗಿ, ಸಂಧ್ಯಾ ತಿಲಕ್ರಾಜ್, ಸತೀಶ್ ಕೊಡವೂರು, ಸತೀಶ್ ಮಂಚಿ, ಶರತ್ ಶೆಟ್ಟಿ, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬೂತ್ ಸಮಿತಿಯ ಅಧ್ಯಕ್ಷರು, ಬಿ.ಎಲ್.ಏ-2ಗಳು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಂಬಲಪಾಡಿ ಗ್ರಾಮ ಪಂಚಾಯತ್
ಅಂಬಲಪಾಡಿ ಗ್ರಾಮ ಪಂಚಾಯತ್ ಎದುರು ನಡೆದ ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಹರೀಶ್ ಕಿಣಿ ಅವರು ಕಾಂಗ್ರೆಸ್ ಪಕ್ಷವು ಆಡಳಿತವಿದ್ದ ಎಲ್ಲಾ ಸಂದರ್ಭದಲ್ಲಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವಂತದ್ದು. ಜನಸಾಮಾನ್ಯರ ಬಗ್ಗೆ ಕಾಳಜಿ ಹೊಂದಿರುವ ಕಾಂಗ್ರೆಸ್ ಪಕ್ಷವು ಯಾವುದೇ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಧಾರ್ಮಿಕ ವಿಚಾರಗಳನ್ನು ಕೆದಕಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳತ್ತಿರುವ ಬಿಜೆಪಿ ಇನ್ನಾದರೂ ಜನಪರವಾಗಿ ಕಾರ್ಯ ನಿರ್ವಹಿಸಲಿ ಎಂದು ತಿಳಿಸಿದರು.
ಈ ಪ್ರತಿಭಟನಾ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಪಕ್ಷದ ನಾಯಕರಾದ ಪ್ರಸಾದ್ ರಾಜ್ ಕಾಂಚನ್, ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಅಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಮಹಾಬಲ ಕುಂದರ್, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯ ಲಕ್ಷ್ಮಣ್ ಪೂಜಾರಿ, ಕಾಂಗ್ರೆಸ್ ಪಕ್ಷದ ನಾಯಕರಾದ ನರಸಿಂಹಮೂರ್ತಿ, ಅಣ್ಣಯ್ಯ ಶೇರಿಗಾರ್, ಐರಿನ್ ಅಂದ್ರಾದೆ, ಯುವರಾಜ್ ಪುತ್ತೂರು, ನಳಿನಾಕ್ಷಿ ಬಂಗೇರ, ಪ್ರಮೀಳಾ ಸುವರ್ಣ, ಆನಂದ್ ಪೂಜಾರಿ, ಜ್ಯೋತಿ ಕಪ್ಪೆಟ್ಟು, ದಯಾನಂದ್ ಮಾಸ್ಟರ್, ಉದಯ್ ಪಂದುಬೆಟ್ಟು, ದಿನೇಶ್ ಮೂಡುಬೆಟ್ಟು, ಸಾಯಿರಾಜ್ ಕೋಟ್ಯಾನ್, ಸದಾನಂದ್ ಕುಲಾಲ್, ಸುರೇಶ್ ಶೆಟ್ಟಿ, ಗಣೇಶ್ ನೆರ್ಗಿ, ಸಂಧ್ಯಾ ತಿಲಕ್ರಾಜ್, ಸತೀಶ್ ಕೊಡವೂರು, ಸತೀಶ್ ಮಂಚಿ, ಭರತ್ , ಅರ್ಚನಾ, ಸುಪ್ರಿತಾ, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬೂತ್ ಸಮಿತಿಯ ಅಧ್ಯಕ್ಷರು, ಬಿ.ಎಲ್.ಏ-2ಗಳು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಡೆಕಾರ್ ಗ್ರಾಮ ಪಂಚಾಯತ್
ಕಡೆಕಾರ್ ಗ್ರಾಮ ಪಂಚಾಯತ್ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು 9/11 ಸಮಸ್ಯೆ, ಅಕ್ರಮ ಸಕ್ರಮ 53 ಮತ್ತು 57 ಅರ್ಜಿ ತಿರಸ್ಕಾರ, ವೃದ್ದಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ರದ್ದತಿ ಹಾಗೂ ವಿದ್ಯುತ್ ದರ ಏರಿಕೆಯ ಕುರಿತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಮತ್ತು ಕೇಂದ್ರ ಸರ್ಕಾರದ ಆಡಳಿತ ವೈಫಲ್ಯಗಳ ವಿರುದ್ಧ ವಾಸ್ತವ ವಿಚಾರವನ್ನು ತಿಳಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ ಉಡುಪಿಯ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಗಮನಹರಿಸಲಿ. ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಬದಲು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿರುವ ಮಲ್ಪೆ ರಾಷ್ಟ್ರೀಯ ಹೆದ್ದಾರಿ, ಅಂಬಲಪಾಡಿ ರಸ್ತೆ, ಪರ್ಕಳ ರಸ್ತೆ ಹಾಗೂ ಸಂತೆಕಟ್ಟೆ ರಸ್ತೆಯ ಕಾಮಗಾರಿಯ ಬಗ್ಗೆ ಒತ್ತಾಯಿಸಲಿ. ಧರ್ಮದ ರಾಜಕಾರಣವನ್ನು ಬಿಟ್ಟು ಇನ್ನಾದರೂ ಅಭಿವೃದ್ಧಿಗೆ ಗಮನ ಕೊಡಲಿ ಎಂದು ತಿಳಿಸಿದರು.
ಈ ಪ್ರತಿಭಟನಾ ಸಭೆಯಲ್ಲಿ, ಕಾಂಗ್ರೆಸ್ ಪಕ್ಷದ ನಾಯಕರಾದ ಪ್ರಸಾದ್ ರಾಜ್ ಕಾಂಚನ್, ಕಡೆಕಾರ್ ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಜಯಕರ್ ಶೇರಿಗಾರ್, ಉಪಾಧ್ಯಕ್ಷರಾದ ನವೀನ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಸರಸ್ವತಿ, ತಾರಾನಾಥ್ ಸುವರ್ಣ, ಸುಕನ್ಯಾ ಪೂಜಾರಿ, ಲೀಲಾ ಕುಂದರ್, ಇಂದಿರಾ ಶೆಟ್ಟಿ, ರಮೇಶ್ ಕೋಟ್ಯಾನ್, ನಿರ್ಮಲಾ, ವೀಣಾ ಪ್ರಕಾಶ್, ರಂಜಿತಾ, ದಿನೇಶ್, ಕಾಂಗ್ರೆಸ್ ಪಕ್ಷದ ನಾಯಕರಾದ ಮಹಾಬಲ ಕುಂದರ್, ನರಸಿಂಹಮೂರ್ತಿ, ಐರಿನ್ ಅಂದ್ರಾದೆ, ವನಜಾ ಜಯಕರ್, ನಳಿನಾಕ್ಷಿ ಬಂಗೇರ, ಸದಾನಂದ್ ಕುಲಾಲ್, ಸುರೇಶ್ ಶೆಟ್ಟಿ, ದಿನೇಶ್ ಪೂಜಾರಿ, ಗಣೇಶ್ ನೆರ್ಗಿ, ಸಂಧ್ಯಾ ತಿಲಕ್ರಾಜ್, ಸತೀಶ್ ಕೊಡವೂರು, ಸತೀಶ್ ಮಂಚಿ, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬೂತ್ ಸಮಿತಿಯ ಅಧ್ಯಕ್ಷರು, ಬಿ.ಎಲ್.ಏ-2ಗಳು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು