ಉಡುಪಿ: ಮಾದಕ ವಸ್ತುಗಳ ಮಾರಾಟ, ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ- ಎಸ್ಪಿ ಹರಿರಾಮ್ ಶಂಕರ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ.
ಈ ಕುರಿತು ವೀಡಿಯೋ ಸಂದೇಶ ನೀಡಿರುವ ಅವರು ಮಾದಕ ದ್ರವ್ಯಗಳ ಸೇವನೆ ಮತ್ತು ಮಾರಾಟ ಮಾಡುವವರ ಮಾಹಿತಿ ಗೊತ್ತಾದರೆ ಸಾರ್ವಜನಿಕರು ಪೊಲೀಸರ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದ್ದಾರೆ.
2022ರಲ್ಲಿ ಪೊಲೀಸರು ಸುಮಾರು 262 ಪ್ರಕರಣಗಳಲ್ಲಿ 282 ಜನರನ್ನು ಬಂಧಿಸಿದ್ದಾರೆ. 2023ರಲ್ಲಿ 272 ಪ್ರಕರಣಗಳಲ್ಲಿ 304 ಜನರ ಬಂಧನ ಆಗಿದೆ. 2024ರಲ್ಲಿ 123 ಪ್ರಕರಣಗಳನ್ನು ಭೇದಿಸಿ 153 ಜನರನ್ನು ಬಂಧಿಸಲಾಗಿದೆ. ಈ ವರ್ಷ ಆರು ತಿಂಗಳಲ್ಲಿ 87 ಪ್ರಕರಣಗಳನ್ನು ದಾಖಲಿಸಿ 107 ಮಂದಿ ಆರೋಪಿಗಳನ್ನು ಬಂಧಿಸಿದ್ದೇವೆ. ಇತ್ತೀಚೆಗೆ ಉಡುಪಿಯಲ್ಲಿ ಕುಳಿತು ಡ್ರಗ್ಸ್ ದಂಧೆ ನಡೆಸುತ್ತಿದ್ದ ವ್ಯಕ್ತಿಯನ್ನು ನವದೆಹಲಿಯ ಎನ್ ಸಿ ಬಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.