Spread the love
ಉಡುಪಿ: ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿದ್ದಾಗ ಹೃದಯಾಘಾತ; ಚಾಲಕ ಮೃತ್ಯು
ಉಡುಪಿ: ಮಣಿಪಾಲ, ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು ಶುಕ್ರವಾರ ಬೆಳಿಗ್ಗೆ ನಡೆದಿದೆ.
ಮೃತ ಚಾಲಕ ಕಾರ್ಕಳ ನೀರೆ ಬೈಲೂರಿನ ಮೊಯ್ದಿನ್ ಬಾವ (65ವ) ಎಂದು ತಿಳಿದುಬಂದಿದೆ
ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿರುವಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ವೇಳೆ ವಾಹನ ನಿಲ್ಲಿಸಿದ ಚಾಲಕ ಅದೇ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಮಾಜಸೇವಕ ನಿತ್ಯಾನಂದ ಒಳಕಾಡುವರನ್ನು ಕಂಡು ಎದೆನೋವಿನ ವಿಚಾರವನ್ನು ತಿಳಿಸಿದ್ದಾರೆ. ತಕ್ಷಣ ಅವರನ್ನು ಅಂಬುಲೆನ್ಸ್ ನಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಆದರೆ ಅವರು ಮಾರ್ಗಮಧ್ಯೆದಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
Spread the love