ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ; 2.30ಕೋಟಿ ರೂ. ವಂಚನೆ
ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 2.30ಕೋಟಿ ರೂ. ಹಣ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಯಾನಂದ(55) ಎಂಬವರನ್ನು ಅಪರಿಚಿತರು ಮಾ.20ರಂದು ವಾಟ್ಸಾಪ್ ಗ್ರೂಪಿಗೆ ಸೇರಿಸಿದ್ದು, ಆ ಗ್ರೂಪಿನಲ್ಲಿ ಖಾತೆ ತೆರೆದು ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವ ಬಗ್ಗೆ ಸಂದೇಶ ಕಳುಹಿಸಲಾಗಿತ್ತು. ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಗಳಿಸಬಹುದಾಗಿ ಜಯಾನಂದ ಅವರನ್ನು ನಂಬಿಸಲಾಗಿತ್ತು.
ಅದರಂತೆ ಅವರು ಎ.1ರಿಂದ ಮೇ 13ರವರೆಗೆ ಆರೋಪಿಗಳು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 2,30,65,000ರೂ. ಹಣವನ್ನು ವರ್ಗಾವಣೆ ಮಾಡಿದ್ದರು. ಅದರೆ ಈ ತನಕ ಜಯಾನಂದ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಹಣ ಅಥವಾ ಲಾಭಾಂಶವನ್ನು ನೀಡದೇ ಆರೋಪಿಗಳು ವಂಚನೆ ಮಾಡಿರುವುದಾಗಿ ದೂರಲಾಗಿದೆ.