ಉತ್ತಮ ಆಡಳಿತ ನಡೆಸಲು ಮಾಧ್ಯಮದವರ ಸಲಹೆ ಅಗತ್ಯ – ಸಚಿವ ಕೋಟ ಶ್ರೀನಿವಾಸ ಪೂಜಾರಿ 

Spread the love

ಉತ್ತಮ ಆಡಳಿತ ನಡೆಸಲು ಮಾಧ್ಯಮದವರ ಸಲಹೆ ಅಗತ್ಯ – ಸಚಿವ ಕೋಟ ಶ್ರೀನಿವಾಸ ಪೂಜಾರಿ 

ಮಂಗಳೂರು : ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗವು ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆಯೋ ಅದೇ ರೀತಿಯಲ್ಲಿ ಮಾಧ್ಯಮಗಳು ಒಂದು ಪ್ರಮುಖ ಅಂಗವಾಗಿ ಸಮಾಜದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶುಕ್ರವಾರ ದ.ಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದ.ಕ. ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ವೆಬ್‍ಸೈಟ್ ಅನಾವರಣ ಕಾರ್ಯಕ್ರಮದ ಉದ್ಘಾಟನೆ ನೆರೆವೇರಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರು ಅವರಿಗೆ ಉತ್ತಮ ರೀತಿಯಲ್ಲಿ ಆಡಳಿತ ನಿರ್ವಹಿಸಲು ಪತ್ರಕರ್ತರ ಸಹಾಯ ಅಗತ್ಯವಾಗಿದೆ,

ಸಮಾಜದಲ್ಲಿ ಪತ್ರಕರ್ತರ ಜವಾಬ್ದಾರಿ ಹೆಚ್ಚು ಇದೆ, ಪತ್ರಕರ್ತರಿಗೆ ಸರಕಾರದಿಂದ ಹೆಚ್ಚಿನ ಸೌಲಭ್ಯಗಳು ಸಿಗುತ್ತಿಲ್ಲ ಅದರೂ ಉತ್ತಮ ಸಮಾಜವನ್ನು ಕಟ್ಟಲು ಶ್ರಮಸುತ್ತಿರುವವರಲ್ಲಿ ಪತ್ರಕರ್ತರು ಪ್ರಮುಖರಾಗಿರುತ್ತಾರೆ. ಪತ್ರಕರ್ತರು ಯಾವುದೇ ಸಂಧರ್ಭದಲ್ಲಿ ತಾರತಮ್ಯ ಮಾಡದೇ ಕಾರ್ಯನಿರ್ವಹಿಸಬೇಕು. ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಜಿಲ್ಲಾಡಳಿತದಿಂದ ಪೂರ್ಣ ಸಹಕಾರವಿದೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರುರವರು ಮಾತನಾಡಿ ಕಾರ್ಯನಿರತ ಪತ್ರಕರರ್ತರ ಸಂಘವು ಡಿ.ವಿ ಗುಂಡಪ್ಪರವರು ಹುಟ್ಟು ಹಾಕಿದ ಸಂಸ್ಥೆಯಾಗಿದೆ. ಇದರ ಅಡಿಯಲ್ಲಿ ಎಲ್ಲಾ ಜಿಲ್ಲೆಯಲ್ಲಿ ಸಮ್ಮೇಳನ ನಡೆದಿತ್ತು, ಆದರೆ ಕರಾವಳಿ ಜಿಲ್ಲೆಯಲ್ಲಿ ನಡೆಸಲು ಸಾಧ್ಯವಾಗಿರಲಿಲ್ಲ. ಆದರೆ ಇನ್ನೂ ಸ್ವಲ್ಪ ದಿನದಲ್ಲಿ ಈ ಜಿಲ್ಲೆಯಲ್ಲಿ ಕೂಡ ಸಮ್ಮೇಳನ ನಡೆಯುತ್ತದೆ. ಇದಕ್ಕೆ ಶಾಸಕ ಡಿ. ವೇದವ್ಯಾಸ್ ಕಾಮತ್ ಹಾಗೂ ಸಂಸದ ನಳಿನ್ ಕಮಾರ್ ಕಟೀಲ್ ಪ್ರಮುಖ ಕಾರಣವಾಗಿದ್ದಾರೆ.

ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ, ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್, ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಮಂಗಳೂರು ವಿಧಾನ ಸಭಾ ಕ್ಷೇತ್ರ ಶಾಸಕ ಯು.ಟಿ. ಖಾದರ್, ಜಿಲ್ಲಾ ಕಾರ್ಯನಿರತ ಪತ್ರಕರರ್ತರ ಸಂಘ ಅಧ್ಯಕ್ಷ ಶ್ರೀನಿವಾಸ್ ನಾಯಕ್, ಮತ್ತು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಮತ್ತಿತರರರು ಉಪಸ್ಥಿತಿದ್ದರು.


Spread the love