Spread the love
ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ
ಮಂಗಳೂರು: ಕಡಬ ತಾಲೂಕು ಶಿರಾಡಿ ಗ್ರಾಮದ ಸೋಣಂದೂರು ಎಂಬಲ್ಲಿ ವಾಸವಿದ್ದ ಜಗದೀಶ ಎಸ್.ಎಸ್ (44) ಗಾರೆ ಕೆಲಸ ಮಾಡಿಕೊಂಡಿದ್ದು, ಎ. 6 ರಂದು ಮನೆಯಿಂದ ಹೋದವರು ವಾಪಾಸು ಬಾರದೆ ಕಾಣೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Spread the love













