ಉಪ ಚುನಾವಣೆ ಮತ ಎಣಿಕೆ- ನಿಷೇಧಾಜ್ಷೆ

Spread the love

ಉಪ ಚುನಾವಣೆ ಮತ ಎಣಿಕೆ- ನಿಷೇಧಾಜ್ಷೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಪಂಚಾಯತ್ ಸಂಗಬೆಟ್ಟು ಕ್ಷೇತ್ರ ಮತ್ತು ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ಟೋಬರ್ 28 ರಂದು ಮತದಾನವು ನಡೆದು ಮತ ಎಣಿಕೆ ಕಾರ್ಯವು ಅಕ್ಟೋಬರ್ 31 ರಂದು ಬಂಟ್ವಾಳ ತಾಲೂಕು ಕಚೇರಿ ಮತ್ತು ಬೆಳ್ತಂಗಡಿ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಅಕ್ಟೋಬರ್ 31 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಮತ ಎಣಿಕೆ ಕೇಂದ್ರಗಳ (ಬಂಟ್ವಾಳ ತಾಲೂಕು ಕಚೇರಿ ಮತ್ತು ಬೆಳ್ತಂಗಡಿ ಪಟ್ಟಣ ಪಂಚಾಯತ್ ಕಚೇರಿ) 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮತ ಎಣಿಕೆ ಕೇಂದ್ರಗಳ ಆವರಣವನ್ನು ಹೊರತುಪಡಿಸಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಡ ಮತ್ತು ಸರ್ಕರಿ ಕಚೇರಿ ಸುತ್ತಮುತ್ತ ಗುಂಪು ಸೇರುವುದನ್ನು ನಿಷೇಧಿಸಿದೆ.

ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಕಲ್ಲು, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಅಥವಾ ಹಿಡಿದು ಓಡಾಡುವುದನ್ನು ನಿಷೇಧಿಸಿದೆ.

ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಯಾ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ.
ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಛರಿಸುವುದು ಯಾ ಪದ ಹಾಡುವುದು, ಚೇಷ್ಠೆಮಾಡುವುದು, ಸಂಜ್ಞೆಮಾಡುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಯಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಯಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೇರೇಪಿಸುವ ಕ್ರಮಗಳನ್ನು ನಿಷೇಧಿಸಿದೆ.


Spread the love