ಉಳ್ಳಾಲದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Spread the love

ಉಳ್ಳಾಲದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

ಮಂಗಳೂರು: ಅಗಸ್ಟ್ 19ರಂದು ಬೆಳಿಗ್ಗೆ 11-00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ಉಳ್ಳಾಲ ನಗರ ಸಭೆ ಕಛೇರಿಯ ಸಭಾಂಗಣ, ಉಳ್ಳಾಲ ತಾಲೂಕು ಇಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿತ್ತು.

ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ ಮಂಗಳೂರು ರವರು ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡುವಂತೆ ಸಾರ್ವಜನಿಕರಿಗೆ ತಿಳಿಸಿರುತ್ತಾರೆ ಮತ್ತು ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಬಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ ಮಂಗಳೂರು ರವರು ಸೂಕ್ತ ಮಾರ್ಗದರ್ಶನ ನೀಡಿರುತ್ತಾರೆ. ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ 15 ದೂರುಗಳು ಸಾರ್ವಜನಿಕರಿಂದಸ್ವೀಕೃತವಾಗಿರುತ್ತದೆ.

“ಲೋಕಾಯುಕ್ತ ಜನ ಸಂಪರ್ಕ ಸಭೆಯಲ್ಲಿ ಕುಮಾರ ಚಂದ್ರ ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ ಮಂಗಳೂರು, ಪೊಲೀಸ್ ಉಪಾ ಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ ಎನ್ ಮತ್ತು ಸಿಬ್ಬಂದಿಯವರು ಹಾಗೂ ಉಳ್ಳಾಲ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.


Spread the love
Subscribe
Notify of

0 Comments
Inline Feedbacks
View all comments