ಉಳ್ಳಾಲ | ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಮಲತಂದೆಗೆ ಜಾಮೀನು
ಉಳ್ಳಾಲ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದ ಮಲತಂದೆಗೆ ಮಂಗಳೂರಿನ ಎಫ್ಟಿಎಸ್ಸಿ 2ನೇ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಬಾಲಕಿಯನ್ನು ಆಕೆಯ ಮಲತಂದೆ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಅದರಂತೆ ಪೊಲೀಸರು ಆರೋಪಿಯನ್ನು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿತ್ತು.
ಆರೋಪಿಯ ಪರ ಹಿರಿಯ ನ್ಯಾಯವಾದಿ ಎಸ್.ಎಸ್.ಖಾಝಿ ವಾದ ಮಂಡಿಸಿದ್ದು, ಅದರಂತೆ ಶುಕ್ರವಾರ ಆರೋಪಿಗೆ ಜಾಮೀನು ಮಂಜೂರುಗೊಳಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
