Spread the love
ಉಳ್ಳಾಲ: ಯುವಕನ ಮೇಲೆ ಮಾರಕಾಸ್ತ್ರದಿಂದ ದಾಳಿ
ಉಳ್ಳಾಲ: ಯುವಕನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಪರಿಣಾಮ ಗಾಯಗೊಂಡ ಘಟನೆ ತೊಕ್ಕೊಟ್ಟು ಒಳಪೇಟೆ ಬಳಿ ನಡೆದಿರುವುದು ವರದಿಯಾಗಿದೆ.
ಗಾಯಗೊಂಡವರನ್ನು ಅಳೇಕಲ ನಿವಾಸಿ ಫೈಝಲ್ ಎಂದು ಗುರುತಿಸಲಾಗಿದೆ.
ಫೈಝಲ್ ಅವರು ಕಲ್ಲಾಪು ಮಾರುಕಟ್ಟೆ ಗೆ ಬರುತ್ತಿದ್ದ ವೇಳೆ ಒಳಪೇಟೆ ಬಳಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Spread the love