ಉಳ್ಳಾಲ| ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಫೋಟದ ಬೆದರಿಕೆ: ಪ್ರಕರಣ ದಾಖಲು

Spread the love

ಉಳ್ಳಾಲ| ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಫೋಟದ ಬೆದರಿಕೆ: ಪ್ರಕರಣ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಬಾಂಬ್ ಸ್ಫೋಟದ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಸಂತೋಷ್ ದೊಡ್ಡಮನಿ ಅವರು ಮಾರ್ಚ್ 2 ರಂದು ಬೆಳಿಗ್ಗೆ 11.00 ಗಂಟೆಯ ಸುಮಾರಿಗೆ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಇನ್ಸ್ಟಾಗ್ರಾಂ ಪರಿಶೀಲಿಸುವಾಗ ಸುಹಾಸ್ ಶೆಟ್ಟಿ ಎಂಬಾತನ ಫೋಟೋ ಹೊಂದಿದ್ದ ಪೋಸ್ಟ್ಗೆ “shankar11916 Support maadi bro ullal masjid hatra bomb blast madtini (ಉಳ್ಳಾಲ ದರ್ಗಾ ಹತ್ತಿರ ಬಾಂಬ್ ಬ್ಲಾಸ್ಟ್ ಮಾಡುತ್ತೇನೆ, ಸಪೋರ್ಟ್ ಮಾಡಿ)” ಎಂಬ ಕಾಮೆಂಟ್ ಮಾಡಿರುವುದು ಗಮನಕ್ಕೆ ಬಂದಿದೆ.

‘shankar11916’ ಎಂಬ ಇನ್ಸ್ಟಾಗ್ರಾಂ ಬಳಕೆದಾರನು ಧರ್ಮಗಳ ನಡುವೆ ವೈಮನಸ್ಸು, ದ್ವೇಷ ಮತ್ತು ವೈರತ್ವ ಉಂಟುಮಾಡುವ ಹಾಗೂ ಹಿಂಸೆಗೆ ಪ್ರಚೋದಿಸುವ ಉದ್ದೇಶದಿಂದ ಪ್ರಚೋದನಕಾರಿ ಕಾಮೆಂಟ್ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸಂಬಂಧಿತ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪಿರ್ಯಾದಿದಾರರು ಮನವಿ ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.


Spread the love