ಉಸ್ತುವಾರಿ ಸಚಿವರ ದ.ಕ ಜಿಲ್ಲಾ ಪ್ರವಾಸ

Spread the love

ಉಸ್ತುವಾರಿ ಸಚಿವರ ದ.ಕ ಜಿಲ್ಲಾ ಪ್ರವಾಸ

ಮಂಗಳೂರು :ನಗರಾಭಿವೃದ್ಧಿ ಮತ್ತು ವಸತಿ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ದ.ಕ ಜಿಲ್ಲಾ ಪ್ರವಾಸ ಇಂತಿವೆ.

ಸೆಪ್ಟೆಂಬರ್ 26 ರಂದು ಬೆಳಿಗ್ಗೆ 8 ಗಂಟೆಗೆ ಸಕ್ರ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರ ಭೇಟಿ ಹಾಗೂ ಅಹವಾಲು ಸ್ವೀಕಾರ ಮಾಡಲಿದ್ದಾರೆ. 9 ಗಂಟೆಗೆ ಉರ್ವಸ್ಟೋರ್‍ನಲ್ಲಿ ತುಳು ಭವನಕ್ಕೆ ಭೇಟಿ ನೀಡಲಿದ್ದಾರೆ 10.30 ಗಂಟೆಗೆ ಉರ್ವಸ್ಟೋರ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಎ ಗ್ರೇಡ್ ಅಧಿಕಾರಿಗಳ ವಸತಿಗೃಹದ ಉದ್ಘಾಟನೆ. 11 ಗಂಟೆಗೆ ನೇತ್ರಾವತಿ ಸಭಾಂಗಣ, ಜಿಲ್ಲಾ ಪಂಚಾಯತ್‍ನಲ್ಲಿ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 7 ಗಂಟೆಗೆ ಹೊಟೇಲ್ ಓಶಿಯನ್ ಪರ್ಲ್‍ನಲ್ಲಿ ದಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆರ್ಕಿಟೆಕ್ಟ್ಸ್ ಇದರ ವಿಚಾರ ಸಂಕೀರ್ಣ ಉದ್ಘಾಟನೆ ಮಾಡಲಿದ್ದಾರೆ.

ಸೆಪ್ಟಂಬರ್ 27 ರಂದು ಬೆಳಿಗ್ಗೆ 8 ಗಂಟೆಗೆ ಸಕ್ರ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರ ಭೇಟಿ ಹಾಗೂ ಅಹವಾಲು ಸ್ವೀಕಾರ ಮಾಡಲಿದ್ದಾರೆ. 10 ಗಂಟೆಗೆ ಕೊಣಾಜೆ ವಿಶ್ವವಿದ್ಯಾನಿಲಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಹಾಗೂ ಸಂಜೆ 5.30 ಗಂಟೆಗೆ ಮಂಗಳೂರು ಪುರಭವನದಲ್ಲಿ ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ಇದರ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.


Spread the love