ಎಂಆರ್‌ಪಿಎಲ್‌ : ದುರಂತ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಭೇಟಿ‌

Spread the love

ಎಂಆರ್‌ಪಿಎಲ್‌ : ದುರಂತ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಭೇಟಿ‌

ಮಂಗಳೂರು: ಎಂಆರ್‌ಪಿಎಲ್‌ ನಲ್ಲಿ ಇಂದು ದುರಂತ ನಡೆದ ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಪರವಾಗಿ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಭೇಟಿ‌ ನೀಡಿ ಪರಿಶೀಲಿಸಿದರು.

ಬಳಿಕ‌ ಎಂಆರ್‌ಪಿಎಲ್‌ ನ ಎಂ ಡಿ ಯವರೊಂದಿಗೂ ಚರ್ಚಿಸಿ, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಸೂಚಿಸಿದ್ದಾರೆ. ಸಾವನ್ನಪ್ಪಿದ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಮತ್ತು ಸುರಕ್ಷತಾ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಲು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಸುರತ್ಕಲ್ ಉಪತಹಶೀಲ್ದಾರ್ ನವೀನ್ ಕುಮಾರ್ ಇದ್ದರು.


Spread the love
Subscribe
Notify of

0 Comments
Inline Feedbacks
View all comments